vijaya times advertisements
Visit Channel

ಅಣ್ಣಾಮಲೈ ಆಯ್ತು ಈಗ ಸಸಿಕಾಂತ್ ಸೆಂಥಿಲ್ ರಾಜೀನಾಮೆ;ಕಾರಣವೇನು ಗೊತ್ತಾ..?

senthil1_vb_96

ಮಂಗಳೂರು, ಸೆ. 6: ದಕ್ಷಿಣ ಕನ್ನಡದಲ್ಲಿ ಸಸಿಕಾಂತ್ ಸೆಂಥಿಲ್ ಅಂದ್ರೆ ಸಾಕು ಪ್ರಾಮಾಣಿಕತೆಗೆ ಹಾಗೂ ನಿಷ್ಟೆಗೆ ಹೆಸರು ಮಾಡಿದ ಅಧಿಕಾರಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ದಕ್ಷಿಣ ಕನ್ನಡಕ್ಕೆ ಡಿಸಿ ಆಗಿ ಅಧಿಕಾರಕ್ಕೆ ಬಂದು ಸರಿಸುಮಾರು 2 ವರ್ಷವಾಗುತ್ತಾ ಬಂದರೂ ಗಳಿಸಿದ್ದ ಹೆಸರಿಗೆ ಕೊಂಚವೂ ಚ್ಯುತಿ ಬಂದಿರಲಿಲ್ಲ.. ಆದರೆ ಇಂದು ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ರವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜೀನಾಮೆಯ ನಂತರ ಪ್ರತಿಷ್ಠಿತ ಹುದ್ದೆಯಲ್ಲಿದ್ದ ಅಧಿಕಾರಿಯೊಬ್ಬರು ಹೀಗೆ ಏಕಾಏಕಿ ರಾಜೀನಾಮೆ ನೀಡಿರುವ ಘಟನೆ ಇದಾಗಿದೆ.

ಎಂಜಿನಿಯರಿಂಗ್ ಪದವೀಧರರಾಗಿರುವ ಸೆಂಥಿಲ್ ರವರು ವಿದ್ಯಾಭ್ಯಾಸದ ನಂತರ ಹೆಸರಾಂತ ಕಂಪನಿಯೊಂದರಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಿದ್ದರು. ಆದರೆ ಸಿವಿಲ್ ಸರ್ವೀಸ್ ಕನಸು ಹೊತ್ತಿದ್ದ ಅವರು ವೃತ್ತಿಗೆ ರಾಜೀನಾಮೆ ಕೊಟ್ಟು, ತಮ್ಮ ಕನಸಿನ ಬೆನ್ನು ಹತ್ತಿದ್ದರು. ಇದರ ಫಲವಾಗಿ 2009ನೇ ಸಾಲಿನಲ್ಲಿ ತಮಿಳುನಾಡಿನ ಯುಪಿಎಸ್‍ಸಿ ಪರೀಕ್ಷೆಯಲ್ಲಿ ಟಾಪರ್ ಆಗಿ ಹೊರಹೊಮ್ಮಿದ್ದರು. ನಂತರದ ದಿನಗಳಲ್ಲಿ ಬಳ್ಳಾರಿಯಲ್ಲಿ ಅಸಿಸ್ಟೆಂಟ್ ಕಮಿಷನರ್, ಶಿವಮೊಗ್ಗ ಜಿಲ್ಲಾ ಪಂಚಾಯತ್ ನಲ್ಲಿ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್, ಚಿತ್ರದುರ್ಗ ಹಾಗೂ ರಾಯಚೂರಿನಲ್ಲಿ ಡೆಪ್ಯುಟಿ ಕಮಿಷನರ್ ಆಗಿ ಸೇವೆ ಸಲ್ಲಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮವಾಗುವ ಮುನ್ನ ಮೈನ್ಸ್ ಹಾಗೂ ಜಿಯಾಲಜಿ ವಿಭಾಗದಲ್ಲಿ ನಿರ್ದೇಶಕರಾಗಿ ಸಸಿಕಾಂತ್ ಸೆಂಥಿಲ್‍ರವರು ಕರ್ತವ್ಯ ನಿರ್ವಹಿಸಿದ್ದರು.

ಇಷ್ಟೆಲ್ಲಾ ಅನುಭವಗಳನ್ನು ಹೊಂದಿದ್ದ ಸೆಂಥಿಲ್‍ರವರು ಸದ್ಯ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿದೆ. ವೈಯಕ್ತಿಕ ಕಾರಣಗಳಿಂದಾಗಿ ಅವರು ಐಎಎಸ್ ಅಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ್ದಾಗಿ ಬಲ್ಲ ಮೂಲಗಳು ತಿಳಿಸಿವೆಯಾದರೂ ಖಚಿತ ಮಾಹಿತಿ ಲಭ್ಯವಾಗಬೇಕಿದೆ.

ಪ್ರಜಾಪ್ರಭುತ್ವ ವ್ಯವಸ್ಥೆ ಕುಸಿಯುತ್ತಿದೆ. ಭವಿಷ್ಯದಲ್ಲಿ ಮತ್ತಷ್ಟು ಅಡೆತಡೆ ಬರುವ ಸಂಭವವಿದೆ. ಆದ್ದರಿಂದ ನನ್ನ ವೈಯಕ್ತಿಕ ವಿಚಾರದಿಂದಾಗಿ ರಾಜೀನಾಮೆ ಕೊಟ್ಟಿದ್ದೇನೆ. ಜಿಲ್ಲೆಯ ವಿಚಾರದಲ್ಲಿ ತನ್ನ ರಾಜೀನಾಮೆ ತಳುಕು ಹಾಕೋದು ಬೇಡ ಎಂಬುದಾಗಿ ಸೆಂಥಿಲ್ ತಮ್ಮ ರಾಜೀನಾಮೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಅದೇನೇ ಆದರೂ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ರವರ ರಾಜೀನಾಮೆ ಭಾರೀ ಕುತೂಹಲಕ್ಕೆ ಕಾರಣವಾಗಿದ್ದು, ರಾಜಕೀಯ ಒತ್ತಡವಿತ್ತಾ..? ಅಥವಾ ವೈಯಕ್ತಿಕ ವಿಚಾರವೇ ಎಂಬುದು ಇನ್ನೂ ತಿಳಿಯಬೇಕಿದೆ.

Latest News

ರಾಜ್ಯ

ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದಿದ್ದಕ್ಕಾಗಿ ಪ್ರಾಧ್ಯಾಪಕ ಅಮಾನತು!

ನಾವು ಸ್ವಯಂಪ್ರೇರಿತ ಕ್ರಮವನ್ನು ತೆಗೆದುಕೊಂಡಿದ್ದೇವೆ. ವಾಸ್ತವವಾಗಿ ಯಾರೂ ಇಲ್ಲದ ಕಾರಣ ವಿದ್ಯಾರ್ಥಿಯು ನಿಜವಾಗಿಯೂ ಆತಂಕಕ್ಕೊಳಗಾಗಿದ್ದಾನೆ.

ರಾಜಕೀಯ

ನೀವು ಬಡವರು ಎಂದು ಹೇಳಿಕೊಳ್ಳುತ್ತೀರಿ, ಆದ್ರೆ ನಾನು ಅಸ್ಪೃಶ್ಯರಲ್ಲಿ ಒಬ್ಬ : ಮಲ್ಲಿಕಾರ್ಜುನ ಖರ್ಗೆ

ನಾನು ಅಸ್ಪೃಶ್ಯರಲ್ಲಿ ಒಬ್ಬ. ಜನರು ನಿಮ್ಮ ಚಹಾವನ್ನು ಕುಡಿಯುತ್ತಿದ್ದರು,  ಆದರೆ ಯಾರೂ ನನ್ನ ಚಹಾವನ್ನು ಸೇವಿಸಲಿಲ್ಲ ಎಂದು ಖರ್ಗೆ ಅವರು ಪರೋಕ್ಷವಾಗಿ ಮೋದಿ ವಿರುದ್ದ ವಾಗ್ದಾಳಿ ನಡೆಸಿದರು.  

ರಾಜಕೀಯ

ಒಕ್ಕಲಿಗರಿಗೆ 4%-12% ಮೀಸಲಾತಿ ; ಇದು ಉತ್ತಮ ಬೇಡಿಕೆಯಾಗಿದೆ : ನಟ ಚೇತನ್

ಈ ಕುರಿತು ತಮ್ಮ ಫೇಸ್ಬುಕ್ ಮುಖಪುಟದಲ್ಲಿ ಬರೆದುಕೊಂಡಿರುವ ಅವರು, ಕರ್ನಾಟಕದ ಒಕ್ಕಲಿಗ ಲಾಬಿಗಳು ಒಕ್ಕಲಿಗರಿಗೆ 4% – 12% ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದಾರೆ.