ದೇಶದಲ್ಲಿ ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿರಾರು ಪ್ರಕರಣಗಳು ಇನ್ನೂ ಬಗೆಹರಿಯದೆ ಹಾಗೇ ಉಳಿದಿದ್ದು. ಈ ಎಲ್ಲಾ ಪ್ರಕರಣಗಳನ್ನು ಇತ್ಯರ್ಥಗೊಳಿಸಿ ತ್ವರಿತವಾಗಿ ನ್ಯಾಯ ಒದಗಿಸುವ ಸಲುವಾಗಿ 1023 ಫಾಸ್ಟ್ ಟ್ರ್ಯಾಕ್ ನ್ಯಾಯಾಲಯ ಸ್ಥಾಪಸಿಲು ಕೇಂದ್ರ ಸರಕಾರ ಸಜ್ಜಾಗಿದೆ. ದೇಶದಲ್ಲಿ ಈಗಾಗಲೇ ಸಾವಿರಾರು ಅತ್ಯಾಚಾರ ಪ್ರಕರಣಗಳು ಬಗೆಹರಿಯದೆ ಬಾಕಿ ಉಳಿದಿದ್ದು, ಇದಕ್ಕಾಗಿ 1023 ವಿಶೇಷ ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳ ಸ್ಥಾಪನೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು ಈಗಾಗಲೇ ಅಂತಿಮ ಘಟ್ಟ ತಲುಪಿದ್ದು, ಇದೇ ಬರುವ ಅಕ್ಟೋಬರ್ 2ರಿಂದ ಈ ಕೋರ್ಟ್ ಗಳು ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ ಎಂದು ಸರಕಾರ ತಿಳಿಸಿದೆ. ಕಾನೂನು ಸಚಿವಾಲಯದಿಂದ 767.25 ಕೋಟಿ ರೂ. ಬಜೆಟ್‌ನಲ್ಲಿ ಈ ಕಾರ್ಯ ಕೈಗೊಂಡಿದ್ದು, ಇದಕ್ಕೆ ನಿರ್ಭಯಾ ನಿಧಿಯ 474 ಕೋಟಿ ರೂ. ಬೆಂಬಲ ದೊರೆಯಲಿದೆ. ಈ ಹಿಂದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೊದಲ ಹಂತದಲ್ಲಿ 9 ರಾಜ್ಯಗಳಲ್ಲಿ 777 ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪನೆಯಾಗಲಿದ್ದು, 2ನೇ ಹಂತದಲ್ಲಿ 246 ಕೋರ್ಟ್‌ಗಳು ಅಸ್ತಿತ್ವಕ್ಕೆ ಬರಲಿವೆ ಎಂದು ಹೇಳಿತ್ತು.ಈ ಹಿಂದೆ ದೆಹಲಿಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಅತ್ಯಾಚಾರ ಪ್ರಕರಣಗಳು ತ್ವರಿತವಾಗಿ ನ್ಯಾಯಾಲಯದಲ್ಲಿ ಇತ್ಯರ್ಥವಾಗಿ ನ್ಯಾಯ ಒದಗಿಸಿ, ಅಪರಾಧಿಗಳಿಗೆ ತಕ್ಷಣ ಶಿಕ್ಷೆ ವಿಧಿಸಬೇಕು, ಹಾಗಾಗಿ ಪ್ರತೀ ಜಿಲ್ಲೆಯಲ್ಲಿ ತ್ವರಿತ ನ್ಯಾಯಾಲಯ (ಫಾಸ್ಟ್ ಟ್ರಕ್ ಕೋರ್ಟ)ನ್ನು ಸ್ಥಾಪನೆಗೆ ಸರ್ಕಾರ ಮೊದಲು ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದು, ಹೀಗಾಗಿ ಕೇಂದ್ರ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸಲು ಮುಂದಾಗಿದೆ. ಈಗಾಗಲೇ 1023 ವಿಶೇಷ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳು ಸ್ಥಾಪಿಸಿದ್ದು, ಇವು ಅಕ್ಟೋಬರ್ 2 ರಂದು ಕಾರ್ಯನಿರ್ವಹಿಸಲಿದೆ ಎಂದು ಕೇಂದ್ರ ಹೇಳಿದೆ.