Visit Channel

ಆಂಧ್ರದಲ್ಲಿ ಕಾಣಿಸಿಕೊಂಡಿದೆ ನಿಗೂಢ ಕಾಯಿಲೆ!

c366adf1f2c2647f7cb4aae90c73f2ad162e40ee2aa6ca8d3bef26c793c3e4ce

ಆಂಧ್ರಪ್ರದೇಶ, ಡಿ. 07: ಆಂಧ್ರಪ್ರದೇಶದ ಎಲ್ಲೂರು ಪಟ್ಟಣದಲ್ಲಿ ಕಾಣಿಸಿಕೊಂಡ ನಿಗೂಢ ಕಾಯಿಲೆಯಿಂದ ಒಬ್ಬ ಸಾವನ್ನಪ್ಪಿದ್ದು, 300ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶನಿವಾರ ಈ ಪ್ರದೇಶದಲ್ಲಿ ಬೇರೆ ಬೇರೆ ಕಡೆಗಳಲ್ಲಿ ಹಲವಾರು ಮಂದಿಗೆ ಈ ವಿಚಿತ್ರ ಕಾಯಿಲೆ ಕಾಣಿಸಿಕೊಂಡಿದ್ದು   ಕಾಯಿಲೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.

ದಿಢೀರನೇ ಅಸ್ವಸ್ಥಗೊಂಡು ಪ್ರಜ್ಞೆ ಕಳೆದುಕೊಳ್ಳುವುದು, ಬಾಯಲ್ಲಿ ನೊರೆ ಕಾಣಿಸಿಕೊಳ್ಳುವುದು ಮತ್ತು ತೀವ್ರ ನಡುಕ ಇದರ ಪ್ರಮುಖ ಲಕ್ಷಣಗಳಾಗಿದ್ದು, ನಿಗೂಢ ಕಾಯಿಲೆಗೆ ನಗರದ ಜನ ಬೆಚ್ಚಿ ಬಿದ್ದಿದ್ದಾರೆ.

ಮೃತಪಟ್ಟ ವ್ಯಕ್ತಿ ಎಲ್ಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಪಲಕಾರಿಯಾಗದೆ ಮೃತರಾಗಿದ್ದಾರೆ.  ಆರೋಗ್ಯಾಧಿಕಾರಿಗಳಿಗೆ ಈ ರೋಗದ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಯಾವುದೇ ಸಾಂಕ್ರಾಮಿಕದ ಸಂಪರ್ಕವೂ ಇಲ್ಲದ ಪ್ರದೇಶದಲ್ಲಿ ವಾಸವಿರುವವರಲ್ಲೂ ಈ ಕಾಯಿಲೆ ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

 ಇದೇ ರೋಗ ಲಕ್ಷಣದ ಹಿನ್ನೆಲೆಯಲ್ಲಿ 46 ಮಂದಿ ಮಕ್ಕಳು ಮತ್ತು 70 ಮಹಿಳೆಯರು ಸೇರಿ 300ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದಕ್ಕೆ ಏನು ಕಾರಣ ಎನ್ನುವುದು ಸ್ಪಷ್ಟವಾಗಿಲ್ಲ.

ನೀರು ಅಥವಾ ಆಹಾರ ಕಲಬೆರಕೆ ಸಾಧ್ಯತೆಯನ್ನು ಸ್ಥಳೀಯ ಅಧಿಕಾರಿಗಳು ತಳ್ಳಿ ಹಾಕಿದ್ದಾರೆ. ಈ ವಿಚಿತ್ರ ಆರೋಗ್ಯ ಸಮಸ್ಯೆಗೆ ಚಿಕಿತ್ಸೆ ನೀಡುವ ಸಂಬಂಧ ದೆಹಲಿ ಏಮ್ಸ್ ತಜ್ಞ ವೈದ್ಯರ ತಂಡ ಎಲ್ಲೂರು ಆಸ್ಪತ್ರೆ ವೈದ್ಯರ ಜತೆ ಚರ್ಚೆ ನಡೆಸಿದೆ. ಸೆಲೆಬ್ರಲ್-ಬೆನ್ನುಹುರಿ ದ್ರವದ ಮಾದರಿಯನ್ನು ವಿಜಯವಾಡ ಮತ್ತು ವಿಶಾಖಪಟ್ಟಣಂ ಪ್ರಯೋಗಾಲಯಗಳಿಗೆ ಕಳುಹಿಸಿದ್ದು, ವರದಿ ಬಂದ ಬಳಿಕ ನಿಖರವಾದ ಕಾರಣ ತಿಳಿಯಲಿದೆ. ಆರೋಗ್ಯಾಧಿಕಾರಿಗಳು ಕಾಯಿಲೆ ಪೀಡಿತ ಮನೆಗಳಿಗೆ ಹೋಗಿ ನೀರಿನ ಮತ್ತು ರಕ್ತದ ಮಾದರಿಗಳನ್ನು ಸಂಗ್ರಹಿಸಿ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.