Visit Channel

ಆಂಧ್ರ ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆ

download

ಅಮರಾವತಿ, .13: ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಆಂಧ್ರ – ಕರಾವಳಿ ಜಿಲ್ಲೆಗಳಲ್ಲಿ ನಿನ್ನೆಯಿಂದಲೇ ಭಾರೀ ಪ್ರಮಾಣದ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ.

ಭಾರೀ ಬಿರುಗಾಳಿಯಿಂದಾಗಿ ವಿಶಾಖಪಟ್ಟಣಂ ನಗರದ ಟೆನ್ನೆಟಿ ಪಾರ್ಕ್ ಬೀಚ್ ಬಳಿ ಸರಕು ಸಾಗಣೆ ನೌಕೆಯೊಂದು ಕೊಚ್ಚಿಕೊಂಡು ಹೋಗಿದೆ. ಪೂರ್ವ ಗೋದಾವರಿ ಜಿಲ್ಲೆಯ ಕಾಕಿನಾಡ ಸಮೀಪದ ಕರಾವಳಿಯಲ್ಲಿ ಪ್ರಬಲ ವಾಯುಭಾರ ಕುಸಿತ ಉಂಟಾಗಿದ್ದು, ಅನೇಕ ಜಿಲ್ಲೆಗಳಲ್ಲಿ ಧಾರಾಕಾರ ವರ್ಷಧಾರೆಯಾಗಿದೆ.

ರಾಜ್ಯದ 100ಕ್ಕೂ ಹೆಚ್ಚು ಸ್ಥಳಗಳಲ್ಲಿ 11.5 ಸೆಂ.ಮೀನಿಂದ 24ಸೆಂ.ಮೀ ತನಕ ಭಾರೀ ಮಳೆಯಾಗಿದೆ. ಪೂರ್ವ ಗೋದಾವರಿ, ಪಶ್ಚಿಮ ಗೋದಾವರಿ, ಶ್ರೀಕಾಕುಳಂ, ವಿಜಯನಗರಂ, ವಿಶಾಖಪಟ್ಟಣಂ ಮತ್ತು ಕೃಷ್ಣಾ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ.

ಭಾರೀ ಬಿರುಗಾಳಿ ಸಂಭವಿಸಿರುವುದರಿಂದ ವಿಶಾಖಪಟ್ಟಣಂ ನಗರದ ಟೆನ್ನೆಟ್ಟಿ ಪಾರ್ಕ್ ಬೀಚ್ ಬಳಿ ಸರಕು ಸಾಗಣೆ ನೌಕೆಯೊಂದು ಕೊಚ್ಚಿಕೊಂಡು ಹೋಗಿದೆ. ಮಳೆಯಿಂದಾಗಿ ಅನೇಕ ಸ್ಥಳಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ ಎಂದು ಮಾಹಿತಿ ಮೂಲಗಳು ತಿಳಿಸಿವೆ.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.