ಶಾಲಾ ವಿದ್ಯಾರ್ಥಿಗಳ ಆನ್ ಲೈನ್ ಶಿಕ್ಷಣ ವಿಚಾರಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಬುಧವಾರ ಮಹತ್ವದ ತೀರ್ಪು ನೀಡಿದೆ. ಸಿಜೆ ಎ.ಎಸ್.ಒಕಾ, ಆರ್ .ನಟರಾಜ್ ಪೀಠದಿಂದ ಆನ್ ಲೈನ್ ಶಿಕ್ಷಣಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ.
‘ಆನ್ ಲೈನ್ ಶಿಕ್ಷಣ ರದ್ದು ಮಾಡಬೇಕೆಂದು ೨೩ ಪೋಷಕರು ಹೈಕೋರ್ಟ್ ಮೆಟ್ಟಿಲೇರಿ ಪಿಐಎಲ್ ಸಲ್ಲಿಸಿದ್ರು ಈ ಹಿನ್ನಲೆ ಇದೀಗ ಹೈಕೋರ್ಟ್ ಕೋವಿಡ್ ೧೯ ಹಿನ್ನೆಲೆಯಲ್ಲಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು . ಆನ್ ಲೈನ್ ಶಿಕ್ಷಣ ವಿದ್ಯಾರ್ಥಿಗಳ ಮೂಲಭೂತ ಹಕ್ಕು. ಸರ್ಕಾರ ಮೂಲಭೂತ ಹಕ್ಕನ್ನು ನಿರ್ಭಂದಿಸುವಂತಿಲ್ಲ.ಸದ್ಯದ ಪರಿಸ್ಥಿತಿಯಲ್ಲಿ ಆನ್ ಲೈನ್ ಶಿಕ್ಷಣ ಮಾತ್ರ ಸಾಧ್ಯ ಅಂತ ತೀರ್ಪು ನೀಡಿದೆ.
ಇದರ ಜೊತೆ ಹೈಕೋರ್ಟ್ ಸೂಚನೆ ನೀಡಿದೆ. ಯಾವುದೇ ಕಾರಣಕ್ಕೂ ಆನ್ ಲೈನ್ ಶಿಕ್ಷಣ ಕಡ್ಡಾಯ ಮಾಡಿಲ್ಲ . ಜೊತೆಯಲ್ಲಿ ಹೆಚ್ಚುವರಿ ಶುಲ್ಕ ನಿಗದಿಗೂ ಶಾಲೆಗಳಿಗೆ ಸೂಚನೆ ನೀಡಿಲ್ಲ ಆದೇಶವನ್ನು ತಪ್ಪಾಗಿ ವ್ಯಾಖ್ಯಾನಿಸಬಾರದು ಎಂದು ತಿಳಿಸಿದೆ.