ಆರಂಭದಿಂದಲೂ ಅಖಂಡ ಪರವಾಗಿದ್ದೇನೆ: ಡಿ.ಕೆ. ಶಿವಕುಮಾರ್

ಬೆಂಗಳೂರು, ನ. 17: ನಾನು ಆರಂಭದಿಂದಲೂ ಶಾಸಕ ಅಖಂಡ ಅವರ ಪರವಾಗಿದ್ದೇನೆ. ಬೇರೆಯವರ ವೈಯಕ್ತಿಕ ಅಭಿಪ್ರಾಯ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕೆ.ಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಬಂಧನ ಕುರಿತು ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಖಂಡ ಶ್ರೀನಿವಾಸ ಮೂರ್ತಿ ಅವರು ಈವರೆಗೂ ನನ್ನ ಬಳಿ ಬಂದು ಮಾತನಾಡಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದು, ಅದರದೇ ಆದ ಪ್ರಕ್ರಿಯೆ ನಡೆಯುತ್ತಿದೆ. ಕೇವಲ ಒಬ್ಬರ ಅಭಿಪ್ರಾಯದ ಮೇಲೆ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ ಎಂದು ಹೇಳಿದರು.

ನಾನು ನ್ಯಾಯಬದ್ಧವಾಗಿ, ಕಾನೂನಿನ ಚೌಕಟ್ಟಿನಲ್ಲಿ ನಡೆದುಕೊಳ್ಳುವ ಎಲ್ಲರ ಪರವಾಗಿದ್ದೇನೆ. ನಾನು ಅಖಂಡ ಅವರ ಪರವಾಗಿಲ್ಲ ಎಂದು ಯಾರು ಹೇಳಿದರು? ಈ ಪ್ರಕರಣ ನಡೆದ ಕ್ಷಣದಿಂದಲೂ ಅವರ ಜತೆ ಇದ್ದೇವೆ. ನಾನು ನಮ್ಮ ನಾಯಕರು ಅವರ ಮನೆಗೆ ಹೋಗಿದ್ದೇವೆ. ಅವರ ಜತೆ ಚರ್ಚೆ ಮಾಡಿದ್ದೇವೆ. ಪೊಲೀಸರ ವೈಫಲ್ಯ ತೋರಿಸಿದ್ದೇವೆ. ಪೊಲೀಸರು ಬಿಜೆಪಿಯ ಒತ್ತಡಕ್ಕೆ ಮಣಿಯಬಾರದು ಎಂದೂ ಹೇಳಿದ್ದೇವೆ. ಅಖಂಡ ಶ್ರೀನಿವಾಸ್ ಮಾಧ್ಯಮಗಳ ಮುಂದೆ ಮಾತನಾಡುವುದಕ್ಕಿಂತ ನನ್ನ ಬಳಿ ಬಂದು ಮಾತನಾಡಲಿ. ಯಾರದೇ ವೈಯಕ್ತಿಕ ಅಭಿಪ್ರಾಯದ ಕುರಿತು ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಸಂಪತ್ ರಾಜ್ ಆಗಲಿ ಅಥವಾ ಬೇರೆ ಯಾರೇ ಆಗಲಿ ಎಲ್ಲರೂ ಕಾನೂನನ್ನು ಗೌರವಿಸಬೇಕು. ಸರ್ಕಾರ ಕಾನೂನು ದುರುಪಯೋಗ ಮಾಡಿಕೊಳ್ಳುತ್ತಿರುವುದನ್ನೂ ನಾವು ನೋಡುತ್ತಿದ್ದೇವೆ. ಇದು ಬಿಜೆಪಿಯವರ ಕುತಂತ್ರ. ಕಾಂಗ್ರೆಸ್ ಗೆ ಕೆಟ್ಟ ಹೆಸರು ತರಲು ಈ ಪ್ರಯತ್ನ ಮಾಡುತ್ತಿದೆ. ಸಂಪತ್ ರಾಜ್ ಅವರನ್ನು ಟಾರ್ಗೆಟ್ ಮಾಡುತ್ತಿರುವುದು ನಿಜ. ಇದರಲ್ಲಿ ಮುಚ್ಚಿಡುವುದೇನಿಲ್ಲ. ಅವರ ವಿರುದ್ಧದ ಆರೋಪ ಪಟ್ಟಿ ನೋಡಿದ್ದೇನೆ. ಕಾಂಗ್ರೆಸ್ ಅನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕರಿಗೆ ತೊಂದರೆ ನೀಡಬೇಕು ಅಂತಾ ಈ ರೀತಿ ಮಾಡುತ್ತಿದ್ದಾರೆ. ಈ ವಿಚಾರ ನ್ಯಾಯಾಲಯದಲ್ಲಿ ಇರುವ ಕಾರಣ ಹೆಚ್ಚಾಗಿ ಪ್ರತಿಕ್ರಿಯೆ ನೀಡುವುದಿಲ್ಲ. ಸಂಪತ್ ರಾಜ್ ಎಲ್ಲಿಯೂ ಓಡಿ ಹೋಗಿರಲಿಲ್ಲ. ಅವರಿಗೆ ಆರೋಗ್ಯ ಸಮಸ್ಯೆ ಇತ್ತು. ಈಗ ಅವರು ಸಿಕ್ಕಿದ್ದಾರಲ್ಲ ಎಂದರು.

Latest News

ರಾಜಕೀಯ

`ನನ್ನಲ್ಲೂ ದಾಖಲೆಗಳಿವೆ ; `ಸರ್ಟಿಫಿಕೇಟ್ ಕೋರ್ಸ್ʼಗಿಂತ ಬೃಹತ್ ಚಾಪ್ಟರ್ 1, 2, 3 ಆಗುತ್ತವೆ, ಬಿಚ್ಚಲೇ? : ಹೆಚ್.ಡಿಕೆ

ಕಟ್ಟಡಗಳ ಹೆಸರಿನಲ್ಲಿ ಕಮೀಷನ್ ಕಾಂಚಾಣ, ಅಧಿಕಾರಿಗಳನ್ನು ಒಳಕ್ಕೆ ಹಾಕಿಕೊಂಡು ಡೀಲ್ ಮಾಡುವ ಅಶ್ವತ್ ನಾರಾಯಣ್, ಇದೇನಾ ನೀವು ನೀಡುತ್ತಿರುವ ಉನ್ನತ ಶಿಕ್ಷಣ?

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.