ನವದೆಹಲಿ, ಅ. 31: ಅಂದಿನ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯನ್ನು 1984ರಲ್ಲಿ ಆಕೆಯ ಅಂಗರಕ್ಷಕರೇ ಹತ್ಯೆ ಮಾಡಿದ್ದರು. ಈ ಕುರಿತು ಟ್ವೀಟ್ ಮಾಡಿರುವ ಮೋದಿ, ನಮ್ಮ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರ 36ನೇ ಪುಣ್ಯ ತಿಥಿಯ ನಮನಗಳು ಎಂದಿದ್ದಾರೆ.
ಕಾಂಗ್ರೆಸ್ ನಾಯಕರಾದ ಪ್ರಿಯಾಂಕ ಗಾಂಧಿ, ವಾದ್ರಾ ಸೇರಿದಂತೆ ಹಲವರು ದೆಹಲಿಯ ಶಕ್ತಿ ಸ್ಥಳದಲ್ಲಿರುವ ಇಂದಿರಾ ಗಾಂಧಿ ಸಮಾಧಿಗೆ ತೆರಳಿ ಗೌರವ ಸಲ್ಲಿಸಿದ್ದಾರೆ. ಕಳೆದ ಭಾನುವಾರವೂ ಮಾಸಿಕ ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಇಂದಿರಾ ಗಾಂಧಿ ಅವರಿಗೆ ಗೌರವ ಸಲ್ಲಿಸಿದ್ದರು. ‘ಅಕ್ಟೋಬರ್ 31 ರಂದು ನಾವು ಭಾರತದ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯನ್ನು ಕಳೆದುಕೊಂಡೆವು. ನಾನು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
Tributes to our former PM Smt. Indira Gandhi Ji on her death anniversary.
— Narendra Modi (@narendramodi) October 31, 2020