ಬೆಂಗಳೂರು, ಅ. 16: ಎನ್ಟಿಎ, ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಫಲಿತಾಂಶವು ಇಂದು ಪ್ರಕಟವಾಗಲಿದೆ. ಇಂದು ಸಂಜೆ 4 ಗಂಟೆಯ ವೇಳೆಗೆ ಎನ್ಟಿಎ ಫಲಿತಾಂಶ ಹಾಗೂ ಕೊರೋನಾದಿಂದಾಗಿ ನೀಟ್ ಪರೀಕ್ಷೆ ಬರೆಯಲು ಸಾಧ್ಯವಾಗದವರಿಗೆ ಅಕ್ಟೋಬರ್ 14ರಂದು ಪರೀಕ್ಷೆ ನಡೆಸಲಾಗಿತ್ತು. ಆ ಪರೀಕ್ಷೆಗಳ ಫಲಿತಾಂಶ ಇಂದು ಸಂಜೆ ಪ್ರಕಟವಾಗಲಿದೆ. ದೇಶಾದ್ಯಂತ ಸುಮಾರು 14.37 ಲಕ್ಷ ಅಭ್ಯರ್ಥಿಗಳು ನೀಟ್ ಪರೀಕ್ಷೆಯನ್ನು ಬರೆದಿದ್ದರು.
ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಫಲಿತಾಂಶವನ್ನು ntaneet.nic.in ವೆಬ್ಸೈಟ್ನಲ್ಲಿ ವೀಕ್ಷಿಸಬಹುದು ವಿದ್ಯಾರ್ಥಿಗಳು ಫಲಿತಾಂಶ ಪಡೆಯಲು ತಮ್ಮ ಅಡ್ಮಿಟ್ ಕಾರ್ಡ್ನಲ್ಲಿರುವ ತಮ್ಮ ರೋಲ್ ನಂಬರ್ ನಮೂದಿಸಿ, ಫಲಿತಾಂಶವನ್ನು ಪಡೆದುಕೊಳ್ಳಬಹುದು. ಕೊರೋನಾ ಪ್ರೋಟೋಕಾಲ್ ನಡುವೆಯೂ ಸೆಪ್ಟೆಂಬರ್ 14ರಂದು ನೀಟ್ ಪ್ರವೇಶ ಪರೀಕ್ಷೆ ನಡೆಸಲಾಗಿತ್ತು. NEET ಪರೀಕ್ಷೆ ಫಲಿತಾಂಶ ಪ್ರಕಟವಾದ ನಂತರ nta.ac.in, ntaneet.nic.in ವೆಬ್ಸೈಟ್ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.