ಡೆಡ್ಲಿ ವೈರಸ್ ಕೊರೋನಾ ತನ್ನ ವ್ಯಾಪ್ತಿಯನ್ನು ದಿನದಿಂದ ದಿನಕ್ಕೆ ಹೆಚ್ಚಿಸುತ್ತಿದೆ. ಈಗಾಗಲೇ ೩ ನೇ ಸ್ಥಾನಕ್ಕೆ ಬಂದು ನಿಂತಿರೋ ಕೊರೋನಾ ವೈರಸ್ ಜನರ ಜೀವನದಲ್ಲಿ ಚೆಲ್ಲಾಟವಾಡುತ್ತಿದೆ. ಇನ್ನು ತೀವೃ ಆತಂಕ ಮನೆಮಾಡಿರೋ ಕೊರೋನಾದಿಂದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ಕೆಲಸದಲ್ಲಿ ಕೊಂಚ ಬದಲಾವಣೆಯನ್ನು ಮಾಡಿಕೊಂಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ವಿವಿಧೆಡೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಬೇಕಾಗಿತ್ತು. ಆದ್ರೆ ಮಾರಣಾಂತಿಕ ಕೊರೋನಾ ವೈರಸ್ ಹಿನ್ನಲೆ ಸಿಎಂ ರಾಜ್ಯ ಪ್ರವಾಸವನ್ನು ಕೈಬಿಟ್ಟಿದ್ದಾರೆ.
ಇಂದು ಬಿ.ಎಸ್ ಯಡಿಯೂರಪ್ಪ ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ಕಾಮಗಾರಿಗಳಿಗೆ ನೀಡಬೇಕಿತ್ತು. ಆದ್ರೆ ಬೆಂಗಳೂರಿನಿಂದಲೇ ಆನ್ಲೈನ್ ಮೂಲಕ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಬೆಂಗಳೂರಿನ ಕಚೇರಿಯಲ್ಲೇ ಕುಳಿತು ಆನ್ಲೈನ್ ಮೂಲಕ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಆನ್ಲೈನ್ ಮೂಲಕ ಭೂಮಿ ಪೂಜೆ ನೆರವೇರಿಸಿದ್ಧಾರೆ.