ಇಸ್ರೋದಿಂದ ಮತ್ತೊಂದು ದಾಖಲೆ, ವಿಶ್ವ ಭೂಪಟದಲ್ಲಿ ಹೆಚ್ಚಿದೆ ಭಾರತದ ಕೀರ್ತಿ

ಶ್ರೀಹರಿಕೋಟಾ,ನ.27: ಇಸ್ರೋ ಮತ್ತೊಂದು ಸಾಧನೆಯನ್ನು ಮಾಡಿ ದೇಶದ ಹೆಸರನ್ನು ವಿಶ್ವ ಭೂಪಟದಲ್ಲಿ ಎತ್ತಿ ಹಿಡಿಯುವಂತೆ ಮಾಡಿದೆ. ಹೌದು.. ಇಂದು ಬೆಳಗ್ಗೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಸುಧಾರಿತ ಭೂ ವೀಕ್ಷಣೆ ಉಪಗ್ರಹ ಕಾರ್ಟೊಸ್ಯಾಟ್-3 ಹಾಗೂ 13 ಯುಎಸ್ ನ್ಯಾನೊ ಸ್ಯಾಟಲೈಟ್‌ಗಳನ್ನು ಯಶಸ್ವಿಯಾಗಿ ಉಡಾವಣೆಗೊಳಿಸಿದೆ. ಉಪಗ್ರಹಗಳನ್ನು ಹೊತ್ತೊಯ್ದ ಇಸ್ರೋದ ಉಡಾವಣಾ ವಾಹಕ ಪಿಎಸ್ಎಲ್ ವಿ-ಸಿ47 ರಾಕೆಟ್  ಕಕ್ಷೆ ಸೇರಿದೆ.

ಭೂಮಿಯ ಚಿತ್ರಣ ಹಾಗೂ ಮ್ಯಾಪ್‌ಗೆ ಸಂಬಂಧಿಸಿದ ಅಧ್ಯಯನಕ್ಕೆ ಸಹಾಯಕಾರಿಯಾಗುವ ಕಾರ್ಟೊಸ್ಯಾಟ್‌-3 ಉಪಗ್ರಹ ಸೇರಿದಂತೆ, ಅಮೆರಿಕದ 13 ಮೈಕ್ರೋ ಉಪಗ್ರಹಗಳನ್ನು ಇಸ್ರೋ ನಭಕ್ಕೆ ಕಳುಹಿಸಿದೆ. ಹೈ ರೆಸಲ್ಯೂಶನ್‌ ಇರುವ ಫೋಟೊಗಳನ್ನು ಸೆರೆ ಹಿಡಿಯುವ ಸಾಮರ್ಥ್ಯವಿರುವ 3ನೇ ತಲೆಮಾರಿನ ಉಪಗ್ರಹ ಕಾರ್ಟೊಸ್ಯಾಟ್‌-3, ಒಟ್ಟು 1625 ಕೆಜಿ ತೂಕವಿದ್ದು 5 ವರ್ಷಗಳ ಕಾಲ ಕಾರ್ಯ ನಿರ್ವಹಿಸಲಿದೆ….

ಇಸ್ರೋದ ಈ ಹೊಸ ದಾಖಲೆಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇನ್ನೂ ಹೆಚ್ಚಿನ ಸಾಧನೆಗಳಿಗೆ ದಾರಿಯಾಗಲಿ ಎಂದು ಶುಭ ಕೋರಿದ್ದಾರೆ.

Latest News

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.

ಮಾಹಿತಿ

ITR ಸಲ್ಲಿಕೆ ಗಡುವು ಜುಲೈ 31 ಅಂತ್ಯ ; ದಂಡ ಶುಲ್ಕವಿಲ್ಲದೆ ಯಾರೆಲ್ಲಾ ITR ಸಲ್ಲಿಸಬಹುದು ಗೊತ್ತಾ?

ಗಡುವು ಮುಗಿದರೂ ಯಾರೆಲ್ಲ ದಂಡ ಶುಲ್ಕವಿಲ್ಲದೆ ಐಟಿಆರ್‌ ಸಲ್ಲಿಸಬಹುದು, ಇದಕ್ಕೆ ಸಂಬಂಧಿಸಿದಂತೆ ನಿಯಮ ಏನು ಹೇಳುತ್ತದೆ ಎನ್ನುವ ವಿವರ ಇಲ್ಲಿದೆ. ಮುಂದೆ ಓದಿ,

ದೇಶ-ವಿದೇಶ

“ನನ್ನ ಮಕ್ಕಳಿಗೆ ಆಹಾರ ನೀಡಬೇಕೇ? ಅಥವಾ ಅವರನ್ನು ಕೊಲ್ಲಬೇಕೇ?”: ಬೆಲೆ ಏರಿಕೆ ಬಗ್ಗೆ ಪಾಕ್ ಮಹಿಳೆ ಆಕ್ರೋಶ!

ನನ್ನ ಮಕ್ಕಳಿಗೆ ಹಾಲು ಮತ್ತು ಔಷಧಿಗಳನ್ನು ಖರೀದಿಸುವುದು, ನನ್ನ ಮಕ್ಕಳಿಗೆ ಆಹಾರ ನೀಡುವುದು ಯಾವುದು ನನ್ನಿಂದ ಸಾಧ್ಯವಾಗುತ್ತಿಲ್ಲ.