ಬೆಂಗಳೂರು,ಸೆ.18; ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬೆಂಗಳೂರಿನ ಎಂಜಿ ರಸ್ತೆಯ ಯುಕೋ ಬ್ಯಾಂಕ್ ನಲ್ಲಿ ಸಂಭವಿಸಿದೆ. ಯುಕೋ ಬ್ಯಾಂಕ್ ನ 2ನೇ ಮಹಡಿಯಲ್ಲಿರುವ ಸ್ವಿಚ್ ಬೋರ್ಡ್‍ನಲ್ಲಿ ಶಾರ್ಟ್ ಸಕ್ರ್ಯೂಟ್ ಸಂಭವಿಸಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಆಗಮಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
2ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಭಯಭೀತರಾದ ಜನರು ಬಿಲ್ಡಿಂಗ್ ನ ಟೆರೇಸ್ ಭಾಗಕ್ಕೆ ತೆರಳಿದ್ದಾರೆ. ಏಣಿ ಮೂಲಕ ಅಲ್ಲಿಗೆ ತೆರಳಿದ ಅಗ್ನಿಶಾಮಕ ದಳ ಸಿಬ್ಬಂದಿ ಅವರ ರಕ್ಷಣೆ ಮಾಡಿದ್ದಾರೆ,ಅಲ್ಲದೆ ಯಾಔಉದೇ ಪ್ರಾಣ ಹಾನಿ ಸಂಭವಿಸಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಹೆಚ್ಚಿನ ತನಿಖೆಯಲ್ಲಿ ತೊಡಗಿದ್ದಾರೆ.