Visit Channel

ಎಲ್ ಪಿಜಿ ಗ್ರಾಹಕರಿಗೆ ಶಾಕಿಂಗ್ ನ್ಯೂಸ್

933660-879008-cylinder-price-hike

ನವದೆಹಲಿ, ನ.2 : ಕೊರೋನಾದಿಂದ ವ್ಯಾಪಾರಿಗಳ ಬದುಕು ಈಗಾಗಲೇ ದುಸ್ತರವಾಗಿದೆ. ಆದರೆ ಅದರ ನಡುವೆ ಮತ್ತೊಂದು ಶಾಕಿಂಗ್‌ ನ್ಯೂಸ್‌ ಬಂದಿದೆ. ಅದೇನಂದ್ರೆ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆ ಮತ್ತೆ ಏರಿಕೆಯಾಗಿದೆ. ಇದರಿಂದ ಸಣ್ಣ ಸಣ್ಣ ಹೊಟೇಲುದಾರರಿಗೆ ಭಾರೀ ತೊಂದರೆಯಾಗಿದೆ. ಕೊರೋನಾದಿಂದಾಗಿ ಮದ್ಯಮ ವರ್ಗದ ಜನರ ಜೀವನ ನೆಲಕಚ್ಚಿದೆ. ಬಡವರಿಗಿಂತಲೂ ಕೆಳಮಟ್ಟಕ್ಕೆ ಹೋಗಿದೆ ಎಂದರೆ ತಪ್ಪಾಗಲಾರದು. ಇಂತಹ ಸಮಯದಲ್ಲಿ ಬೆಲೆ ಏರಿಕೆಯಾಗಿರುವುದು ಬಡ ಸಣ್ಣ ವ್ಯಾಪಾರಿಗಳಿಗೆ ಭಾರೀ ಹೊಡೆತವಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಅನಿಲದ ದರವನ್ನು ಆಧರಿಸಿ ತೈಲ ಮಾರುಕಟ್ಟೆ ಕಂಪೆನಿಗಳು ತಿಂಗಳ ಮೊದಲ ದಿನದಂದು ದೇಶದಾದ್ಯಂತ ಎಲ್‌ಪಿಜಿ ಸಿಲಿಂಡರ್‌ಗಳ ದರವನ್ನು ನಿರ್ಧಾರ ಮಾಡುತ್ತವೆ. ಅದರಂತೆ ನವೆಂಬರ್ ತಿಂಗಳ ಆರಂಭದಲ್ಲಿ ವಾಣಿಜ್ಯ ಉದ್ದೇಶಿತ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿದೆ. ಗೃಹ ಬಳಕೆ ಸಿಲಿಂಡರ್ ದರ ಏರಿಕೆ ಆಗಿಲ್ಲ.
ಮಾರ್ಚ್, ಏಪ್ರಿಲ್, ಮೇ ತಿಂಗಳಿನಲ್ಲಿ ಗೃಹಬಳಕೆಯ ಸಬ್ಸಿಡಿರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಮತ್ತೊಮ್ಮೆ ತಗ್ಗಿಸಲಾಗಿತ್ತು.  ಈಗ 19 ಕೆ.ಜಿಯ ಕಮರ್ಷಿಯಲ್ ಎಲ್ ಪಿ ಜಿ ಸಿಲಿಂಡರ್ ಬೆಲೆ 75 ರು ಏರಿಕೆ ಮಾಡಲಾಗಿದೆ. ಪರಿಷ್ಕೃತ ದರ ನವೆಂಬರ್ 01ರಿಂದಲೇ ಜಾರಿಗೆ ಬಂದಿದ್ದು, ದೆಹಲಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ 1241.50 ರು/ಸಿಲಿಂಡರ್ ನಷ್ಟಿದೆ. ಅಕ್ಟೋಬರ್ ತಿಂಗಳಲ್ಲಿ ಈ ದರ ದೆಹಲಿಯಲ್ಲಿ1166 ರು ಪ್ರತಿ ಸಿಲಿಂಡರ್ ನಷ್ಟಿತ್ತು.
ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್ ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ. ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ. ಇದಲ್ಲದೆ ಆರು ತಿಂಗಳಿಗೊಮ್ಮೆ ನೈಸರ್ಗಿಕ ಅನಿಲದ ಸರಾಸರಿ ದರ ನಿಗದಿಪಡಿಸಲಾಗುತ್ತದೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.