vijaya times advertisements
Visit Channel

ಎಸ್.ಎಂ.ಕೃಷ್ಣ ಕುಟುಂಬದ ಜೊತೆಗೆ ನಂಟು ಬೆಳೆಸುತ್ತಿರುವ ಡಿಕೆಶಿ

WhatsApp Image 2020-06-04 at 11.22.47 AM

ಕೆ.ಪಿ.ಸಿ.ಸಿ ಅಧ್ಯಕ್ಷ.. ಕಾಂಗ್ರೆಸ್ ಪಕ್ಷದ ಪ್ರಬಲ ನಾಯಕ ಡಿ.ಕೆ.ಶಿವಕುಮಾರ್ ರವರ ಹಿರಿಯ ಪುತ್ರಿಗೆ ಕಂಕಣ ಭಾಗ್ಯ ಕೂಡಿಬಂದಿದೆ.ಕೆಫೆ ಕಾಫಿ ಡೇ ಮಾಲಿಕ ಸಿದ್ದಾರ್ಥ ಹೆಗಡೆಯವರ ಮಗನ ಜೊತೆ ಮದುವೆ ನಡೆಸಲು ಎರಡೂ ಕುಟುಂಬದವರು ತೀರ್ಮಾನ ಕೈಗೊಂಡಿದ್ದಾರೆ ಅನ್ನೋ ಮಾಹಿತಿ ತಿಳಿದುಬಂದಿದೆ. ಈ ಮೂಲಕ ಡಿಕೆಶಿ ಎಸ್.ಎಂ ಕೃಷ್ಣರವರ ಕುಟುಂಬದ ಜೊತೆ ನೆಂಟಸ್ಥನ ಬೆಳೆಸಲು ಮುಂದಾತ್ತಾಗಿದೆ.

ಇತ್ತೀಚೆಗೆ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಮೊಮ್ಮಗ , ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ವಿವಾಹ ಇತ್ತೀಚೆಗಷ್ಟೇ ನಡೆದಿತ್ತು. ಇದರ ಬೆನ್ನಲ್ಲೇ ಕರ್ನಾಟಕದ ಇನ್ನೋರ್ವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಮೊಮ್ಮಗನ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಗಳ ಮದುವೆ ಮಾತುಕತೆ ನಡೆದಿರೋದು ರಾಜಕೀಯ ರಂಗದಲ್ಲಿ ಸಂಚಲನ ಮೂಡಿಸಿದೆ.

ಡಿಕೆಶಿ ಪುತ್ರಿ ಐಶ್ವರ್ಯ ಇಂಜಿನಿಯರಿಂಗ್ ಓದುತ್ತಿದ್ದು ಕೆಫೆ ಕಾಫಿ ಡೇ ಸಂಸ್ಥಾಪಕ ದಿವಂಗತ ಸಿದ್ಧಾರ್ಥ ರವರ ಪುತ್ರ ಅಮಾಥ್ರ್ಯ ಹೆಗ್ಡೆಯೊಂದಿಗೆ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ವಿವಾಹ ನಡೆಸಲು ಮಾತುಕತೆ ನಡೆದಿದೆ.ಬರುವ ಅಕ್ಟೋಬರ್ ನಲ್ಲಿ ಅಮಾಥ್ರ್ಯ ಹೆಗ್ಡೆ ಮತ್ತು ಡಿ.ಕೆ.ಶಿವಕುಮಾರ್ ಪುತ್ರಿ ವಿವಾಹ ಮಹೋತ್ಸವ ನಡೆಯಲಿದೆ ಎಂದು ಎರಡೂ ಕುಟುಂಬಗಳ ಆಪ್ತ ಮೂಲಗಳು ತಿಳಿಸಿವೆ. ಆಗಸ್ಟ್ ತಿಂಗಳಲ್ಲಿ ಅಮಾಥ್ರ್ಯ ಹೆಗ್ಡೆ-ಐಶ್ವರ್ಯ ನಿಶ್ಚಿತಾರ್ಥ ಸಮಾರಂಭ ನಡೆಯುವ ಸಾಧ್ಯತೆ ಇದೆ. ಇನ್ನು

ಇಂಜಿನಿಯರಿಂಗ್ ಓದಿರುವ ಪುತ್ರಿ ಐಶ್ವರ್ಯಗೆ ಮದುವೆ ಮಾಡಲು ಡಿ.ಕೆ.ಶಿವಕುಮಾರ್ ಮುಂದಾಗಿದ್ದಾರೆ.ಕರ್ನಾಟಕದ ಮಾಜಿ ಮುಖ್ಯಮಂತ್ರಿಯೊಬ್ಬರ ಮೊಮ್ಮಗ.. ಪ್ರಖ್ಯಾತ ಉದ್ಯಮಿಯ ಮಗನೊಂದಿಗೆ ತಮ್ಮ ಪುತ್ರಿ ಐಶ್ವರ್ಯ ವಿವಾಹ ಮಹೋತ್ಸವ ನಡೆಸಲು ಡಿ.ಕೆ.ಶಿವಕುಮಾರ್ ತಯಾರಿ ನಡೆಸಿದ್ದಾರೆ. ಹಾಗಾದ್ರೆ, ಯಾರು ‘ಆ’ ವರ.? ನೀವೇ ನೋಡಿ…ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮೊಮ್ಮಗ.. ಹೆಸರಾಂತ ಉದ್ಯಮಿ,.ಡಿ.ಕೆ.ಶಿವಕುಮಾರ್ ಪುತ್ರಿ 22 ವರ್ಷ ವಯಸ್ಸಿನ ಐಶ್ವರ್ಯ ಇಂಜಿನಿಯರಿಂಗ್ ಪದವೀಧರೆ. ಡಿ.ಕೆ.ಶಿವಕುಮಾರ್ ಒಡೆತನದ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಸಂಸ್ಥೆಯ ಜವಾಬ್ದಾರಿಯನ್ನು ಐಶ್ವರ್ಯ ವಹಿಸಿಕೊಂಡಿದ್ದಾರೆ.ಅಮೇರಿಕಾದಲ್ಲಿ ಶಿಕ್ಷಣ ಪಡೆದಿರುವ 26 ವರ್ಷದ ಅಮಾಥ್ರ್ಯ ಹೆಗ್ಡೆ, ತಾಯಿ ಮಾಳವಿಕಾ ಜೊತೆಗೆ ಕುಟುಂಬದ ಬಿಸಿನೆಸ್ ನೋಡಿಕೊಳ್ಳುತ್ತಿದ್ದಾರೆ.ಎಸ್.ಎಂ.ಕೃಷ್ಣ, ಉದ್ಯಮಿ ಸಿದ್ದಾರ್ಥ ಮತ್ತು ಡಿ.ಕೆ.ಶಿವಕುಮಾರ್ ಮಧ್ಯೆ ಉತ್ತಮ ಬಾಂಧವ್ಯವಿದೆ. ಇಷ್ಟು ದಿನ ಉತ್ತಮ ಸ್ನೇಹಿತರಾಗಿದ್ದವರು ಇದೀಗ ಬಂಧುಗಳಾಗಲು ಹೊರಟಿದ್ದಾರೆ.

Latest News

ರಾಜ್ಯ

ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದಿದ್ದಕ್ಕಾಗಿ ಪ್ರಾಧ್ಯಾಪಕ ಅಮಾನತು!

ನಾವು ಸ್ವಯಂಪ್ರೇರಿತ ಕ್ರಮವನ್ನು ತೆಗೆದುಕೊಂಡಿದ್ದೇವೆ. ವಾಸ್ತವವಾಗಿ ಯಾರೂ ಇಲ್ಲದ ಕಾರಣ ವಿದ್ಯಾರ್ಥಿಯು ನಿಜವಾಗಿಯೂ ಆತಂಕಕ್ಕೊಳಗಾಗಿದ್ದಾನೆ.

ರಾಜಕೀಯ

ನೀವು ಬಡವರು ಎಂದು ಹೇಳಿಕೊಳ್ಳುತ್ತೀರಿ, ಆದ್ರೆ ನಾನು ಅಸ್ಪೃಶ್ಯರಲ್ಲಿ ಒಬ್ಬ : ಮಲ್ಲಿಕಾರ್ಜುನ ಖರ್ಗೆ

ನಾನು ಅಸ್ಪೃಶ್ಯರಲ್ಲಿ ಒಬ್ಬ. ಜನರು ನಿಮ್ಮ ಚಹಾವನ್ನು ಕುಡಿಯುತ್ತಿದ್ದರು,  ಆದರೆ ಯಾರೂ ನನ್ನ ಚಹಾವನ್ನು ಸೇವಿಸಲಿಲ್ಲ ಎಂದು ಖರ್ಗೆ ಅವರು ಪರೋಕ್ಷವಾಗಿ ಮೋದಿ ವಿರುದ್ದ ವಾಗ್ದಾಳಿ ನಡೆಸಿದರು.  

ರಾಜಕೀಯ

ಒಕ್ಕಲಿಗರಿಗೆ 4%-12% ಮೀಸಲಾತಿ ; ಇದು ಉತ್ತಮ ಬೇಡಿಕೆಯಾಗಿದೆ : ನಟ ಚೇತನ್

ಈ ಕುರಿತು ತಮ್ಮ ಫೇಸ್ಬುಕ್ ಮುಖಪುಟದಲ್ಲಿ ಬರೆದುಕೊಂಡಿರುವ ಅವರು, ಕರ್ನಾಟಕದ ಒಕ್ಕಲಿಗ ಲಾಬಿಗಳು ಒಕ್ಕಲಿಗರಿಗೆ 4% – 12% ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದಾರೆ.