ದೆಹಲಿ: ದೇಶದಲ್ಲಿ ಕೋವಿಡ್ ಪೀಡಿತರ ಸಂಖ್ಯೆ ಏರುತ್ತಲೇ ಇದ್ದು ಕಳೆದ 24 ಗಂಟೆಗಳಲ್ಲಿ 89 ಸಾವಿರ ಹೊಸ ಪ್ರಕರಣಗಳು ದಾಖಲೆಯಾಗಿದೆ. ಆ ಮೂಲಕ ಒಟ್ಟಾರೆ ಸೊಂಕಿತರ ಸಂಖ್ಯೆ 43 ಲಕ್ಷದ ಗಡಿ ದಾಟಿದೆ ಎಂದು ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ.
ಕೋವಿಡ್ ವೈರಾಣು ತಗುಲಿರುವ ದೇಶಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಏರಿದ್ದು, ಕಳೆದ ಒಂದೇ ದಿನ 89,706 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಕಳೆದೊಂದು ದಿನದಲ್ಲಿ 1,115 ಜನರು ಸೋಂಕಿನ ಕಾರಣದಿಂದ ಮೃತಪಟ್ಟಿದ್ದು, ಒಟ್ಟು ಮೃತರ ಪ್ರಮಾಣ 73,890ಕ್ಕೆ ಜಿಗಿದಿದೆ.
ಕೊರೊನಾದಿಂದ ಈವರೆಗೆ ಸುಮಾರು 33 ಲಕ್ಷ ಸೋಂಕಿತರು ಗುಣಮುಖರಾಗಿದ್ದು, ದೇಶದಲ್ಲಿ ಚೇತರಿಕೆ ಪ್ರಮಾಣ 77.32% ರಷ್ಟಿದೆ. ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು ರಾಜ್ಯಗಳಲ್ಲಿ ಸೊಂಕಿತರ ಪ್ರಮಾಣ ದಿನದಿಂದ ದಿನಕ್ಕೆ ದ್ವಿಗುಣಗೊಳ್ಳುತ್ತಿದೆ. ಈ ರಾಜ್ಯಗಳಲ್ಲೇ ಒಟ್ಟಾರೆ 49% ಸೋಂಕಿತರ ಹೊಸ ಪ್ರಕರಣಗಳು ವರದಿಯಾಗುತ್ತಿದ್ದು, ಮೃತರ ಪ್ರಮಾಣ 52% ಇದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.