ಮುಂಬೈ: ಮೂರು ಅಂತಸ್ತಿನ ವಸತಿ ಕಟ್ಟವೊಂದು ಕುಸಿದು ಪರಿಣಾಮ 8 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದೆ.
ಮುಂಬೈನ ಥಾಣೆಯಲ್ಲಿರುವ ಬಿವಾಂಡಿ ನಗರದ ಪಟೇಲ್ ಕಾಂಪೌಂಡ್ ಏರಿಯಾದಲ್ಲಿ ಈ ಅವಘಡ ಸಂಭವಿಸಿದೆ. ತಡರಾತ್ರಿ 3:40ರ ವೇಳೆಯಲ್ಲಿ ಈ ಅನಾಹುತ ಸಂಭವಿಸಿದ್ದು, ಘಟನೆಯಲ್ಲಿ 8 ಮಂದಿ ಮೃತಪಟ್ಟಿದ್ದು, ಸ್ಥಳೀಯರು 25ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಈ ನಡುವೆ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿರುವ ಎನ್.ಡಿ.ಆರ್.ಎಫ್. ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳೀಯರ ಪ್ರಕಾರ ಈ ಕಟ್ಟಡ 1984ರಲ್ಲಿ ನಿರ್ಮಿಸಲಾಗಿದ್ದು, 20ಕ್ಕೂ ಹೆಚ್ಚು ಕುಟುಂಬಗಳು ಕಟ್ಟಡದಲ್ಲಿ ವಾಸವಾಗಿದ್ದರು ಎನ್ನಲಾಗಿದೆ.