ಕಣ್ಣೀರು ತರಿಸುತ್ತಿದೆ ಈರುಳ್ಳಿ ದರ!

ಮೈಸೂರು, ಅ. 28: ರಾಜ್ಯದಲ್ಲಿ ಅನೇಕ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಉತ್ತರ ಕರ್ನಾಟಕ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಈರುಳ್ಳಿ ಬೆಳಗಾರರಿಗೆ ಆತಂಕ ಎದುರಾಗಿದೆ. ಏಕೆಂದರೆ ಈರುಳ್ಳಿ ಬೆಳೆ ಹೊಲದಲ್ಲೇ ಕೊಳೆಯುವಂತಾಗಿದೆ. ಇದರಿಂದ ಬೆಲೆ ಕೆ.ಜಿಗೆ ₹ 100ರ ಗಡಿ ತಲುಪಿದೆ.

ಹಿಂಗಾರು ಮಳೆಗೂ ಮುನ್ನ ಅಂದರೆ ಸೆ.14ರವರೆಗೂ ಈರುಳ್ಳಿ ಬೇರೆಡೆ ರಫ್ತಾಗುತ್ತಿತ್ತು. ಇದೂ ಬೆಲೆ ಏರಿಕೆಗೆ ಒಂದು ಕಾರಣವಾಗಿತ್ತು. ಮಳೆರಾಯನ ಆರ್ಭಟದ ಬಳಿಕ ಈರುಳ್ಳಿ ರಫ್ತಿಗೆ ನಿಷೇಧ ಹೇರಿದರೂ ಅ.9ರಂದು ಕೆಲವು ತಳಿಯ ಈರುಳ್ಳಿ ರಫ್ತಿಗೆ ಅನುಮತಿ ನೀಡುವ ಮೂಲಕ ನಿರ್ಬಂಧ ಸಡಿಲಿಸಲಾಯಿತು.

ಇದರಿಂದ ಇಲ್ಲಿನ ಎಪಿಎಂಸಿ ಮಾರುಕಟ್ಟೆಗೆ ಈರುಳ್ಳಿ ಈ ತಿಂಗಳಿನಲ್ಲಿ ಹೆಚ್ಚಾಗಿ ಸಂಗ್ರಹವಾಗುತ್ತಿಲ್ಲ. ಮೊದಲಿಗಿಂತ ಸಂಗ್ರಹದ ಪ್ರಮಾಣದಲ್ಲಿ ಭಾರಿ ಕುಸಿತ ಕಂಡಿದೆ. ಹೀಗಾಗಿ, ಸಹಜವಾಗಿಯೇ ಬೆಲೆ ದುಬಾರಿಯಾಗಿದೆ ಎನ್ನಲಾಗುತ್ತಿದೆ.

ಚಿಲ್ಲರೆ ಮಾರುಕಟ್ಟೆಗಳ ದರವನ್ನು ಗಮನಿಸುವುದಾದರೆ, ಸಾಮಾನ್ಯ ದರ್ಜೆಯ ಈರುಳ್ಳಿ ದರ ಕೆ.ಜಿಗೆ ₹ 100 ಇದ್ದು, ಹಾಪ್‌ಕಾಮ್ಸ್‌ನಲ್ಲಿ ಇದರ ದರ ಕೆ.ಜಿಗೆ ₹ 82ರಿಂದ ₹ 85ರವರೆಗೂ ಇದೆ ಎಂದು ತಿಳಿದು ಬಂದಿದೆ.

ಅಧಿಕ ಮಾಸದ ನಂತರ ಮದುವೆ ಮೊದಲಾದ ಶುಭ ಸಮಾರಂಭಗಳು ಆರಂಭವಾಗಿದ್ದು, ಆಯೋಜಕರು ಈರುಳ್ಳಿ ಖರೀದಿಗಾಗಿ ಪರದಾಡುವಂತಾಗಿದೆ. ಈರುಳ್ಳಿ ಬೆಲೆ ಹೆಚ್ಚಳದಿಂದ ಗ್ರಾಹಕರು ಹೈರಾಣಾಗಿದ್ದಾರೆ. ನಷ್ಟದಿಂದ ಕಂಗೆಟ್ಟಿದ್ದ ಹೋಟೆಲ್ ಉದ್ಯಮದವರು ಈರುಳ್ಳಿ ಬೆಲೆ ಏರಿಕೆಯಿಂದ ಮತ್ತಷ್ಟು ನಷ್ಟಕ್ಕೆ ತುತ್ತಾಗಿದ್ದಾರೆ ಎಂದು ಎನ್ನಲಾಗುತ್ತಿದೆ.

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.