ಬೆಂಗಳೂರು, ನ. 3: ಕನ್ನಡ ರಾಜ್ಯೋತ್ಸವ ಅಂಗವಾಗಿ 2020ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ಲೈನ್ನಲ್ಲಿ ಕೂಡ ಈ ಶೇ. 50% ರಿಯಾಯಿತಿ ಲಭ್ಯವಿದೆ.