• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಕಾಂಗ್ರೆಸ್‍ನ ‘ಪ್ರಜಾಪ್ರಭುತ್ವ ಉಳಿಸಿ’ ಹೋರಾಟ ಪ್ರಶ್ನಿಸಿ ಮಾಜಿ ಸಿಎಂ ಎಚ್‍ಡಿಕೆ ಸರಣಿ ಟ್ವೀಟ್‍

Kiran K by Kiran K
in Vijaya Time
0
SHARES
0
VIEWS
Share on FacebookShare on Twitter

ಬಿಜೆಪಿ ವಿರುದ್ಧ ದೇಶಾಧ್ಯಂತ “ಪ್ರಜಾಪ್ರಭುತ್ವ ಉಳಿಸಿ” ಎಂದು ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಪ್ರಶ್ನಿಸಿ ಸರಣಿ ಟ್ವೀಟ್ ಮಾಡಿರುವ ಎಚ್.ಡಿ.ಕುಮಾರಸ್ವಾಮಿ, ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ “ಪ್ರಜಾಪ್ರಭುತ್ವ ಉಳಿಸಿ” ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಸರ್ಕಾರ ರಚಿಸಲು ಬೆಂಬಲ ನೀಡಿದ ಬಿಎಸ್‍ಪಿ ಪಕ್ಷದ ಎಲ್ಲ ಶಾಸಕರನ್ನೂ ಕಾಂಗ್ರೆಸ್ ಸೆಳೆದಿಲ್ಲವೇ? ಇದು ಖರೀದಿಯಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಅಲ್ಲದೇ, ಸರ್ಕಾರ ರಚಿಸಲು ಬೆಂಬಲ ಕೊಟ್ಟವರನ್ನೇ ಕುತಂತ್ರದಿಂದ ಸೆಳೆದುಕೊಳ್ಳುವುದು, ಇಡೀ ಪಕ್ಷವನ್ನೇ ವಿಲೀನ ಮಾಡಿಸಿಕೊಳ್ಳುವುದು ಪ್ರಜಾಪ್ರಭುತ್ವ ನಡೆಯೇ? ಸಮಾನ ಮನಸ್ಕ ಪಕ್ಷಗಳನ್ನು ಒಡೆದು ಶಾಸಕರನ್ನು ಸೆಳೆಯುತ್ತಿದ್ದರೆ ನಿಮಗೆ ಯಾರು ಬೆಂಬಲ ಕೊಟ್ಟಾರು. ಈ ತಪ್ಪುಗಳು ನಿಮಗೆ ಕಾಣುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಶಾಸಕರ ಖರೀದಿ ವಿಚಾರವಾಗಿ ದೊಡ್ಡ ಗಂಟಲು ಮಾಡುತ್ತಿರುವ ಕಾಂಗ್ರೆಸ್ ಹಿಂದೆ ಜೆಡಿಎಸ್ ಅನ್ನು ಒಡೆದಿಲ್ಲವೇ? ಒಡೆಯಲು ಪ್ರಯತ್ನಗಳನ್ನು ಮಾಡಲಿಲ್ಲವೇ? ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಂಟು ಮಂದಿಯನ್ನು ಕೇವಲ ರಾಜ್ಯಸಭೆ ಚುನಾವಣೆಗಾಗಿ ಖರೀದಿಸಲಿಲ್ಲವೇ? ಇದು ಪ್ರಜಾಸತ್ತಾತ್ಮಕವೇ? ಖರೀದಿ ವಿಚಾರದಲ್ಲಿ ಎರಡೂ ಪಕ್ಷಗಳೂ ‘ಅಪರಾಧಿ’ಗಳೇ ಎಂದು ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಈ ಹಿಂದೆ ಎಸ್.ಎಂ ಕೃಷ್ಣ ಅವರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ನಮ್ಮ ಶಾಸಕರನ್ನು ಖರೀದಿ ಮಾಡಿರಲಿಲ್ಲವೇ? 2018ರ ವಿಧಾನಸಭೆ ಚುನಾವಣೆ ನಂತರ ನಮ್ಮ ಶಾಸಕರನ್ನು ಖರೀದಿಸಿ ಸ್ವತಂತ್ರವಾಗಿ ಸರ್ಕಾರ ರಚಿಸಲು ಹೊಂಚು ಹಾಕಿರಲಿಲ್ಲವೇ? ಕಾಂಗ್ರೆಸ್ ಬಳಿ ಈ ಪ್ರಶ್ನೆಗಳಿಗೆ ಉತ್ತರಿಸಲು ನೈತಿಕತೆ ಇದೆಯೇ? ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, 2004ರ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಇದೇ ಕಾಂಗ್ರೆಸ್ ನಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಿತ್ತು. ಇದನ್ನು ಮನಗಂಡೇ ನಾನು ಕ್ಷಿಪ್ರ ರಾಜಕೀಯ ಕ್ರಾಂತಿ ಮಾಡಬೇಕಾಯಿತು. ಪಕ್ಷಗಳನ್ನು ಒಡೆಯುವ, ಶಾಸಕರನ್ನು ಖರೀದಿಸುವ ವ್ಯವಾಹರದಲ್ಲಿ ಕಾಂಗ್ರೆಸ್ ನಿಪುಣ. ‘ಕುದುರೆ ವ್ಯಾಪಾರ’ ಎಂಬ ಭಾಷೆ ಹುಟ್ಟಿದ್ದೇ ಕಾಂಗ್ರೆಸ್ನಿಂದ ಎಂದು ಟೀಕಿಸಿದ್ದಾರೆ.

ಪಕ್ಷಾಂತರ ನಿಷೇಧ ಕಾಯ್ದೆ ಪರಿಣಾಮಕಾರಿಯಾಗಿಲ್ಲ. ‌ಆದ್ದರಿಂದಲೇ ಈ ಪ್ರಜಾಪ್ರಭುತ್ವ ವಿರೋಧಿ ಪ್ರಹಸನಗಳು ನಡೆಯುತ್ತಿವೆ. ಹಾಗಾಗಿ ಪಕ್ಷಾಂತರ ಮಾಡಿದ ವ್ಯಕ್ತಿ, ಆತನ ಕುಟುಂಬಕ್ಕೆ 2 ಅವಧಿಗೆ ಚುನಾವಣೆ ನಿರ್ಬಂಧಿಸುವ ಮತ್ತು ಈ ಅವಧಿಯಲ್ಲಿ ಯಾವುದೇ ಅಧಿಕಾರ ಹೊಂದದಂತೆ ಮಾಡುವುದು ಸೂಕ್ತ.ಇದರತ್ತ ಚರ್ಚೆಗಳಾದರೂ ನಡೆಯಲಿ, ಪ್ರಜಾಪ್ರಭುತ್ವ ಉಳಿಯಲಿ ಎಂದಿದ್ದಾರೆ. ಇನ್ನೂ ಪ್ರಜಾಪ್ರಭುತ್ವ ಉಳಿಸಲು ಪ್ರಾಣ ನೀಡುವುದಾಗಿ ಕಾಂಗ್ರೆಸ್‌ ಪ್ರತಿಭಟನೆಯಲ್ಲಿ ಹೇಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಸ್ವಾಮಿ, ಜೀವ ಅಮೂಲ್ಯ.ನೀವು ಪ್ರಾಣ ಕೊಡುವುದು ಬೇಡ.ಕಾಂಗ್ರೆಸ್‌ ನಡೆದು ಬಂದ ದಾರಿಯನ್ನು ಒಂದು ಬಾರಿ ನೆನಪಿಸಿಕೊಳ್ಳಿ.ನಂತರ ಪಕ್ಷಾಂತರ ನಿಷೇಧ ಕಾಯ್ದೆಯನ್ನು ಸದೃಢಗೊಳಿಸುವತ್ತ ಚಿಂತನೆ ಮಾಡಿ.ಪ್ರಜಾಪ್ರಭುತ್ವ ತಾನಾಗಿಯೇ ಉಳಿಯುತ್ತದೆ ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

Related News

ಬಸ್‌ ಡ್ರೈವರ್‌ ಮಗ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ರೋಚಕ ಕತೆ
Vijaya Time

ಬಸ್‌ ಡ್ರೈವರ್‌ ಮಗ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ರೋಚಕ ಕತೆ

December 12, 2022
ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ; SC/ST ಸಮಾವೇಶಕ್ಕೆ ಸಿದ್ಧತೆ : ಕಾಂಗ್ರೆಸ್‌
Vijaya Time

ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ; SC/ST ಸಮಾವೇಶಕ್ಕೆ ಸಿದ್ಧತೆ : ಕಾಂಗ್ರೆಸ್‌

December 12, 2022
ಕಾಂತಾರ ನೋಡಿಲ್ಲ ಎಂದು ಟ್ರೋಲ್ ಮಾಡಿದವರಿಗೆ ನಾನು ನೋಡಿದ್ದೇನೆ ಎಂದ ನಟಿ ರಶ್ಮಿಕಾ ಮಂದಣ್ಣ!
Vijaya Time

ಕಾಂತಾರ ನೋಡಿಲ್ಲ ಎಂದು ಟ್ರೋಲ್ ಮಾಡಿದವರಿಗೆ ನಾನು ನೋಡಿದ್ದೇನೆ ಎಂದ ನಟಿ ರಶ್ಮಿಕಾ ಮಂದಣ್ಣ!

December 10, 2022
ಕೆಪಿಸಿಸಿ ಕಚೇರಿಯಲ್ಲೋ, ಕಾಂಗ್ರೆಸ್ ನಾಯಕರ ಮನೆಯಲ್ಲೋ ಟಿಪ್ಪು ಪ್ರತಿಮೆ ನಿರ್ಮಿಸಲಿ – ಬಿಜೆಪಿ
Vijaya Time

ಕೆಪಿಸಿಸಿ ಕಚೇರಿಯಲ್ಲೋ, ಕಾಂಗ್ರೆಸ್ ನಾಯಕರ ಮನೆಯಲ್ಲೋ ಟಿಪ್ಪು ಪ್ರತಿಮೆ ನಿರ್ಮಿಸಲಿ – ಬಿಜೆಪಿ

November 15, 2022

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.