ಕಾಳಿಚರಣ್‌ ಮಹರಾಜ್‌ಗೆ ಜಾಮೀನು

ಮುಂಬೈ ಜ 8 : ಮಹಾತ್ಮ ಗಾಂಧಿ ಬಗ್ಗೆ ಅವಹೇಳನಕಾರಿ ಭಾಷಣ ಹಾಗೂ ನಾಥೂರಾಮ್‌ ಗೋಡ್ಸೆ ಅವರನ್ನು ಹೊಗಳಿ ಭಾಷಣ ಮಾಡಿದ್ದಕ್ಕೆ ಬಂಧಿತರಾಗಿದ್ದ ಕಾಳಿಚರಣ್ ಮಹಾರಾಜ್ ಗೆ ಕಾಳಿಚರಣ್ ಪುಣೆ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ನೀಡಿರುವುದಾಗಿ ತಿಳಿದುಬಂದಿದೆ

ಮಹಾತ್ಮ ಗಾಂಧಿ ಅವಹೇಳನಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ಸಾಕ್ಷಿ ಮಹಾರಾಜ್‌ರನ್ನು ಬಿಡುಗಡೆಗೊಳಿಸುವಂತೆ ಹಲವು ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಪ್ರಕರಣದಲ್ಲಿ ಏಕಮುಖವಾಗಿ ತನಿಖೆ ನಡೆಸಲಾಗಿದೆ, ಹಿಂದೂ ಸಮುದಾಯವನ್ನು ಪ್ರಚೋದಿಸಲು ಕಾಳಿಚರಣ್ ಮಹಾರಾಜ್‌ರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ತಕ್ಷಣವೇ ರಾಷ್ಟ್ರಪತಿ ಮಧ್ಯಪ್ರವೇಶಿಸಬೇಕೆಂದು ಹಿಂದುತ್ವವಾದಿಗಳು ಆಗ್ರಹಿಸಿದ್ದರು.

ರಾಯಪುರದಲ್ಲಿ ನಡೆದ ಧರ್ಮ ಸಂಸದ್ ವೇಳೆ ಪ್ರಚೋದನಕಾರಿಯಾಗಿ ಮಾತನಾಡಿದ್ದ ಕಾಳಿ ಚರಣ್ ಮಹಾರಾಜ್ ಮಹಾತ್ಮ ಗಾಂಧೀಜಿ ಅವರನ್ನು ಟೀಕೆ ಮಾಡಿದ್ದಲ್ಲದೆ, ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯನ್ನು ಸಮರ್ಥಿಸಿ ವಿವಾದ ಸೃಷ್ಟಿಸಿದ್ದರು.

ಈ ಪ್ರಕರಣದ ವಾದ-ಪ್ರತಿವಾದಗಳನ್ನು ಆಲಿಸಿ, ನೀಡಲಾದ ದಾಖಲೆಗಳನ್ನು ಪರಿಶೀಲಿಸಿದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್​ ಕೋರ್ಟ್ ನ್ಯಾಯಾಧೀಶ ಎಂ.ಎ.ಶೇಖ್​, ಕಾಳಿ ಚರಣ್​​ರನ್ನು ನ್ಯಾಯಾಂಗ ಬಂಧನದಲ್ಲಿ ಇಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನಷ್ಟು ಆಳವಾದ ತನಿಖೆಗಳು ಆಗುವ ಅಗತ್ಯವಿದೆ. ಅಲ್ಲಿಯವರೆಗೂ ಆರೋಪಿಯನ್ನು ಜೈಲಿನಲ್ಲಿ ಇರಿಸಬೇಕಾದ ಅಗತ್ಯ ಕಾಣುತ್ತಿಲ್ಲ. ಅವರಿಗೆ ಷರತ್ತುಬದ್ಧ ಜಾಮೀನು ನೀಡಬಹುದು ಎಂದು ತೀರ್ಪು ನೀಡಿದ್ದಾರೆ.  25 ಸಾವಿರ ರೂ.ಶ್ಯೂರಿಟಿ ಬಾಂಡ್​, ತನಿಖೆಗೆ ಸಹಕರಿಸಬೇಕು, ತಿಂಗಳಿಗೊಮ್ಮೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಭೇಟಿ ನೀಡಬೇಕು ಎಂಬಿತ್ಯಾದಿ ಷರತ್ತುಗಳನ್ನು ವಿಧಿಸಿ ಕಾಳಿ ಚರಣ್​ರಿಗೆ ಜಾಮೀನು ನೀಡಿದ್ದಾರೆ.

Latest News

ಮಾಹಿತಿ

ITR ಸಲ್ಲಿಕೆ ಗಡುವು ಜುಲೈ 31 ಅಂತ್ಯ ; ದಂಡ ಶುಲ್ಕವಿಲ್ಲದೆ ಯಾರೆಲ್ಲಾ ITR ಸಲ್ಲಿಸಬಹುದು ಗೊತ್ತಾ?

ಗಡುವು ಮುಗಿದರೂ ಯಾರೆಲ್ಲ ದಂಡ ಶುಲ್ಕವಿಲ್ಲದೆ ಐಟಿಆರ್‌ ಸಲ್ಲಿಸಬಹುದು, ಇದಕ್ಕೆ ಸಂಬಂಧಿಸಿದಂತೆ ನಿಯಮ ಏನು ಹೇಳುತ್ತದೆ ಎನ್ನುವ ವಿವರ ಇಲ್ಲಿದೆ. ಮುಂದೆ ಓದಿ,

ದೇಶ-ವಿದೇಶ

“ನನ್ನ ಮಕ್ಕಳಿಗೆ ಆಹಾರ ನೀಡಬೇಕೇ? ಅಥವಾ ಅವರನ್ನು ಕೊಲ್ಲಬೇಕೇ?”: ಬೆಲೆ ಏರಿಕೆ ಬಗ್ಗೆ ಪಾಕ್ ಮಹಿಳೆ ಆಕ್ರೋಶ!

ನನ್ನ ಮಕ್ಕಳಿಗೆ ಹಾಲು ಮತ್ತು ಔಷಧಿಗಳನ್ನು ಖರೀದಿಸುವುದು, ನನ್ನ ಮಕ್ಕಳಿಗೆ ಆಹಾರ ನೀಡುವುದು ಯಾವುದು ನನ್ನಿಂದ ಸಾಧ್ಯವಾಗುತ್ತಿಲ್ಲ.

ಮಾಹಿತಿ

ಬುದ್ದಿವಂತರು ಜಗಳವನ್ನು ಹೇಗೆ ತಪ್ಪಿಸುತ್ತಾರೆ ಗೊತ್ತೇ? ; ಈ ಅಚ್ಚರಿ ಮಾಹಿತಿ ಓದಿ

ಕೆಟ್ಟ ವಾಗ್ವಾದವನ್ನು ತಡೆಯುವುದು ಹೇಗೆ ಮತ್ತು ಅದನ್ನು ಸರಿಯಾಗಿ ರೀತಿಯಲ್ಲಿ ಹೇಗೆ ನಿಭಾಯಿಸಬಹುದು ಎನ್ನುವುದಕ್ಕಾಗಿ ಕೆಲವು ಉಪಾಯಗಳು ಇಲ್ಲಿವೆ ನೋಡಿ.

ರಾಜಕೀಯ

ನಿತೀಶ್‌ ಕುಮಾರ್‌ ಪ್ರಧಾನಿಯಾಗುವ ಭ್ರಮೆಯಲ್ಲಿದ್ದಾರೆ, ಅದಕ್ಕಾಗಿ ವಿಪಕ್ಷಗಳ ಕೂಟ ಸೇರಿದ್ದಾರೆ : ಬಿಜೆಪಿ

ಇದು ‘ಆಯಾ ರಾಮ್, ಗಯಾ ರಾಮ್ʼ ಕಾಯಿಲೆಗೆ ಉದಾಹರಣೆ. ಹಡಗು ಜಿಗಿದು ದಾಖಲೆ ನಿರ್ಮಿಸಿದ್ದಾರೆ. ಅವರು ಉನ್ನತ ಕುರ್ಚಿಗೆ ಹಾತೊರೆಯುತ್ತಿದ್ದಾರೆ.