ಮಂಡ್ಯ,ಆ.29: ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ಕಾವೇರಿ ಮಾತೆಗೆ ಬಾಗಿನ ಸಮರ್ಪಣೆ ಮಾಡಿದರು. ಇತ್ತೀಚೆಗೆ ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದ ಕಾವೇರಿ ನದಿ ತುಂಬಿ ಹರಿಯುತ್ತಿದ್ದು ಈ ಹಿನ್ನೆಲೆ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಕೆ.ಆರ್ ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ವೇದ ಬ್ರಹ್ಮ ಭಾನುಪ್ರಕಾಶ್ ಶರ್ಮಾ ತಂಡದ ನೇತೃತ್ವದಲ್ಲಿ ಕಾವೇರಿ ಮಾತೆಗೆ ಸಿಎಂ ಪೂಜೆ ಸಲ್ಲಿದರು.
ಸಿಎಂ ಆಗಿ 4ನೇ ಬಾರಿಗೆ ಬಿಎಸ್ ಯಡಿಯೂರಪ್ಪ ಬಾಗಿನ ಸಮರ್ಪಣೆ ಮಾಡಿದ್ದಾರೆ. ಈ ಹಿಂದೆ 2008ರಿಂದ ಸತತವಾಗಿ ಮೂರು ಬಾರಿ ಬಾಗಿನ ಅರ್ಪಿಸಿದ್ದರು. ಸಿಎಂಗೆ ಸಚಿವರಾದ ಆರ್.ಅಶೋಕ್, ವಿ.ಸೋಮಣ್ಣ, ಸಂಸದರಾದ ಸುಮಲತಾ, ಪ್ರತಾಪ್ ಸಿಂಹ, ಶಾಸಕರಾದ ಸಿ.ಎಸ್.ಪುಟ್ಟರಾಜು, ರವೀಂದ್ರ ಶ್ರೀಕಂಠಯ್ಯ ಸೇರಿದಂತೆ ಮಂಡ್ಯ, ಮೈಸೂರು ಜಿಲ್ಲೆಯ ಶಾಸಕರು ಭಾಗಿಯಾಗಿದ್ದರು.