ಕಾಶ್ಮೀರ: ಉಗ್ರರ ದಾಳಿಗೆ ಯೋಧರ ಸಾವು

ಶ್ರೀನಗರ:  ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ರಸ್ತೆ ಉದ್ಘಾಟನಾ ಸಮಾರಂಭದ ವೇಳೆ ಕರ್ತವ್ಯದಲ್ಲಿದ್ದ ಸಿ ಆರ್ ಪಿ ಎಫ್ ಯೋಧರ ಮೇಲೆ ಹಠಾತ್ತನೆ ದಾಳಿಯಾಗಿದೆ.  ಕೇಂದ್ರೀಯ ಮೀಸಲು ಪಡೆಯ( ಸಿಆರ್ ಪಿ ಎಫ್) ಸಿಬ್ಬಂದಿ ಮೇಲೆ ಗುಂಡಿನ ದಾಳಿಯಲ್ಲಿ  ಇಬ್ಬರು ಯೋಧರು ಸಾವಿಗೀಡಾಗಿದ್ದಾರೆ. ದಕ್ಷಿಣ ಕಾಶ್ಮೀರದ ಪಂಪೋರ್ ನಲ್ಲಿ ಗಸ್ತು ತಿರುಗುತ್ತಿದ್ದ ಸಿ ಆರ್ ಪಿ ಎಫ್ ಸಿಬ್ಬಂದಿ ಮೇಲೆ ಉಗ್ರರು ಸೋಮವಾರ ದಾಳಿ ನಡೆಸಿದ್ದಾರೆ.

ಉಗ್ರರ ದಾಳಿಗೆ ಒಳಗಾದ 5 ಮಂದಿಯನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಈ ಪೈಕಿ ಇಬ್ಬರು ಮ್ರತರಾಗಿದ್ದಾರೆ. ದಾಳಿಯ ಬಳಿಕ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಭದ್ರತಾ ಸಿಬ್ಬಂಧಿಯಿಂದ ಶೋಧ ಕಾರ್ಯ ಮುಂದುವರಿದಿದೆ. ದಾಳಿಯ ಸಂಪೂರ್ಣ ವಿವರ ಇನ್ನೂ ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Exit mobile version