• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕಾಸರಗೋಡಿಗೆ ಹಾಕಿದ ಗಡಿ ದಿಗ್ಬಂಧನ ತೆರವಿಗೆ ಕೇರಳ ಮನವಿ : ಹೈಕೋರ್ಟ್ ಮಧ್ಯಂತರ ಆದೇಶ

Kiran K by Kiran K
in ದೇಶ-ವಿದೇಶ, ಪ್ರಮುಖ ಸುದ್ದಿ, ಲೈಫ್ ಸ್ಟೈಲ್
0
SHARES
0
VIEWS
Share on FacebookShare on Twitter

 ಕೇರಳದ ರೋಗಿಗಳಿಗೆ ಕರ್ನಾಟಕದ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಗೆ ಕೊಡಿಸುವ ನಿಟ್ಟಿನಲ್ಲಿ ಕರ್ನಾಟಕ ವಿಧಿಸಿರುವ ಗಡಿ ದಿಗ್ಬಂಧನವನ್ನು ತೆಗೆದುಹಾಕುವಂತೆ ಕೇರಳ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿ ಮಧ್ಯಂತರ ಆದೇಶ ಪ್ರಕಟಿಸಿದೆ.

ಕೇರಳ ಹೈಕೋರ್ಟ್ ಅಸೋಸಿಯೇಷನ್ ನವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಿತು. ಮಂಗಳೂರು ಮತ್ತು ಕೇರಳದ ಕಾಸರಗೋಡು ನಡುವೆ ಸಂಪರ್ಕಿಸುವ ರಸ್ತೆಯು ರಾಷ್ಟ್ರೀಯ ಹೆದ್ದಾರಿಗಳ ಭಾಗವಾಗಿದೆ. ಆದ್ದರಿಂದ ಈ ರಸ್ತೆಗಳನ್ನು ದಿಗ್ಬಂಧನದಿಂದ ಮುಕ್ತವಾಗಿರಿಸುವಂತೆ ನೋಡಿಕೊಳ್ಳುವುದು ಕೇಂದ್ರ ಸರ್ಕಾರದ ಕರ್ತವ್ಯವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ಕರ್ನಾಟಕವು ನಿರ್ಮಿಸಿರುವ ಗಡಿ ಪ್ರವೇಶ ದಿಗ್ಬಂಧನವನ್ನು ತಕ್ಷಣವೇ ತೆಗೆದುಹಾಕಬೇಕೆಂದು ನಾವು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುತ್ತೇವೆ. ಜೊತೆಗೆ ಯಾವುದೇ ವಿಳಂಬವಿಲ್ಲದೆ ಎರಡು ರಾಜ್ಯಗಳ ನಡುವಿನ ಗಡಿಯುದ್ದಕ್ಕೂ, ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ರೋಗಿಗಳನ್ನು ಕರೆದೊಯ್ಯುವ ವಾಹನಗಳಿಗೆ ಮುಕ್ತ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ನ್ಯಾಯಮೂರ್ತಿ ಎ.ಕೆ.ಜಯಶಂಕರ್ ನಂಬಿಯಾರ್ ಹಾಗೂ ಶಾಜಿ ಪಿ ಚಲಿ ಅವರಿದ್ದ ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.

ಭಾರತದ ಪ್ರಜೆ ದೇಶದ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಮುಕ್ತವಾಗಿ ಸಂಚರಿಸಬಹುದು ಎಂದು ಸಂವಿಧಾನದ 19 (1) (ಡಿ) ವಿಧಿಯಲ್ಲಿ ತಿಳಿಸಲಾಗಿದೆ. ಹೀಗಾಗಿ ಇಂತಹ ಸಂದರ್ಭಗಳಲ್ಲಿ ಗಡಿ ದಿಗ್ಬಂಧನ ಸರಿಯಲ್ಲ. ಗಡಿ ದಿಗ್ಬಂಧ ತೆರವು ಸ್ಥಗಿತವಾದಲ್ಲಿ ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಿಗೆ ತೊಂದರೆಯಾಗಬಹುದು ಎಂದು ಹೈಕೋರ್ಟ್ ತಿಳಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಕಾಸರಗೋಡಿನಿಂದ ಮಂಗಳೂರಿಗೆ ಚಿಕಿತ್ಸೆಗಾಗಿ ಬರುವವರನ್ನು ಮಾನವೀಯ ದೃಷ್ಟಿಯಿಂದ ನೋಡಬೇಕಾಗಿದೆ. ಸಾಮಾನ್ಯ ಸಂಚಾರವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಿ ಚಿಕಿತ್ಸೆಗೆ ಬರುವವರಿಗೆ ಮಾತ್ರ ಎರಡು ರಾಜ್ಯಗಳ ನಡುವಿನ ಹೆದ್ದಾರಿಯನ್ನು ಮುಕ್ತಗೊಳಿಸಬೇಕು. ಕೊರೊನಾ ವಿರುದ್ಧದ ಹೋರಾಟ ಜಾತಿ, ಧರ್ಮ ಮತ್ತು ಗಡಿಯನ್ನು ಮೀರಿದ್ದು ಎಂದು ತಿಳಿಸಿದ್ದಾರೆ.

Related News

ಒಂದಕ್ಕಿಂತ ಹೆಚ್ಚು ಕ್ರೆಡಿಟ್ ಕಾರ್ಡ್ ಹೊಂದಿದ್ದೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ ಓದಿ
Vijaya Time

ಒಂದಕ್ಕಿಂತ ಹೆಚ್ಚು ಕ್ರೆಡಿಟ್ ಕಾರ್ಡ್ ಹೊಂದಿದ್ದೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ ಓದಿ

May 30, 2023
ಬಿಪಿಎಲ್ ಕಾರ್ಡ್ ನೀಡಲು ಪ್ರತಿ ವ್ಯಕ್ತಿಗೆ ರೂ.5,000ದಿಂದ ರೂ.8,000 ಲಂಚ : ಎನ್‌.ಆರ್‌. ರಮೇಶ್‌ ಆರೋಪ
Vijaya Time

ಬಿಪಿಎಲ್ ಕಾರ್ಡ್ ನೀಡಲು ಪ್ರತಿ ವ್ಯಕ್ತಿಗೆ ರೂ.5,000ದಿಂದ ರೂ.8,000 ಲಂಚ : ಎನ್‌.ಆರ್‌. ರಮೇಶ್‌ ಆರೋಪ

May 30, 2023
ಸರ್ಕಾರಿ ಶಾಲೆಗಳಲ್ಲಿ ನೀರು, ಶೌಚಾಲಯ ಏಕಿಲ್ಲ?ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್
Vijaya Time

ಸರ್ಕಾರಿ ಶಾಲೆಗಳಲ್ಲಿ ನೀರು, ಶೌಚಾಲಯ ಏಕಿಲ್ಲ?ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್

May 30, 2023
ನಮ್ಮ ಮೆಟ್ರೋ ಕೆಲಸಕ್ಕೆ ಕಾರ್ಮಿಕರ ಅಭಾವ : ನಾನಾ ಸೌಲಭ್ಯ ಕೊಟ್ರೂ ಸಿಗ್ತಿಲ್ಲ ಕೆಲಸಗಾರರು
Vijaya Time

ನಮ್ಮ ಮೆಟ್ರೋ ಕೆಲಸಕ್ಕೆ ಕಾರ್ಮಿಕರ ಅಭಾವ : ನಾನಾ ಸೌಲಭ್ಯ ಕೊಟ್ರೂ ಸಿಗ್ತಿಲ್ಲ ಕೆಲಸಗಾರರು

May 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.