Visit Channel

ಕುದ್ರೋಳಿ ದಸರಾ: ‘ನಮ್ಮ ದಸರಾ-ನಮ್ಮ ಸುರಕ್ಷೆ’

Dasara_Navaratri_decorations_Kudroli_Temple_Mangalore_Karnataka

ಮಂಗಳೂರು, ಅ. 17: ಕರ್ನಾಟಕದಲ್ಲಿ ಅದ್ಧೂರಿಯಾಗಿ ದಸರಾ ನಡೆಯುವ ಕ್ಷೇತ್ರಗಳಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥವು ಒಂದು. ಮಂಗಳೂರು ದಸರಾ ಎಂದೇ ಪ್ರಸಿದ್ಧವಾಗಿರುವ, ಇಲ್ಲಿನ ದಸರಾ ಇಂದು ಆರಂಭಗೊಂಡಿದೆ. ಆಡಳಿತ ಮಂಡಳಿಯ ಅಪೇಕ್ಷೆಯಂತೆ ಕೋವಿಡ್‌ ವಾರಿಯರ್, ಎನ್‌ಆರ್‌ಐ ಫೋರಂ ಮಾಜಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರು ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಶ್ರೀ ಜನಾರ್ದನ ಪೂಜಾರಿ ಅವರ ಆಶಯದಂತೆ ಮಂಗಳೂರು ದಸರಾ ಮಹೋತ್ಸವವು ‘ನಮ್ಮ ದಸರಾ-ನಮ್ಮ ಸುರಕ್ಷೆ’ ಘೋಷವಾಕ್ಯದಡಿ ಆರಂಭವಾಗಿದೆ.

ನವರಾತ್ರಿಯ ಆರಂಭದ ದಿನವಾದ ಇಂದು ಶಾರದಾ ಮೂರ್ತಿಯನ್ನು ವಾದ್ಯ ಘೋಷಗಳ ಮೆರವಣಿಗೆಯ ಮೂಲಕ ಕರೆತರಲಾಯಿತು. ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದರು. ಇಂದು ಬೆಳಗ್ಗೆ 9.30ಕ್ಕೆ ಗುರುಪ್ರಾರ್ಥನೆ, 11.30ಕ್ಕೆ ಕಲಶ ಪ್ರತಿಷ್ಠೆ, 12.00 ದಸರಾಕ್ಕೆ ಚಾಲನೆ, 12.30ಕ್ಕೆ ನವದುರ್ಗೆಯರ ಮತ್ತು ಶಾರದಾ ಪ್ರತಿಷ್ಠೆ, 12.30ಕ್ಕೆ ಪುಷ್ಪಾಲಂಕಾರ ಮಹಾಪೂಜೆ ನಡೆದಿದ್ದು, ಸಂಜೆ 7.00ರಿಂದ ಭಜನಾ ಕಾರ್ಯಕ್ರಮ, 9.00ರಿಂದ ದೇವಿ ಪುಷ್ಪಾಲಂಕಾರ ಪೂಜೆ ನಡೆಯಲಿದ್ದು, ಈ ಬಾರಿಯ ದಸರಾ ಸರಳ ಸುಂದರವಾಗಿ ನಡೆಯಲಿದೆ ಎಂದು  ದೇವಾಲಯದ ಸಮಿತಿ ತಿಳಿಸಿದೆ.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.