ಕೊನೆಗೂ ಡಿಕೆಶಿಗೆ ಸಿಕ್ಕೇಬಿಡ್ತು ದೀಪಾವಳಿಗೆ ಬಂಪರ್ ಗಿಫ್ಟ್..!

ನವದೆಹಲಿ,ಅ.23: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಕೊನೆಗೂ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಅಕ್ರಮ ಹಣ ವರ್ಗಾವಣೆ ಸಂಬಂಧ ಕಳೆದ 48 ದಿನಗಳಿಂದ ತಿಹಾರ್ ಜೈಲು ಸೇರಿದ್ದ ಕನಕಪುರ ಬಂಡೆಗೆ ಸದ್ಯ ದೆಹಲಿ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. 25 ಲಕ್ಷ ಬಾಂಡ್ ಜೊತೆಗೆ ಪಾಸ್ ಪೋಟ್ ಸರೆಂಡರ್ ಮಾಡಬೇಕು. ವಿದೇಶಿ ಪ್ರಯಾಣಕ್ಕೆ ಕೋರ್ಟ್ ಅನುಮತಿ ಪಡೆಯಬೇಕು. ವಿಚಾರಣೆಗೆ ಕರೆದಾಗಲೆಲ್ಲಾ ಬರಬೇಕು ಎಂದು ಅನೇಕ ಷರತ್ತುಗಳನ್ನು ಕೋರ್ಟ್ ಹಾಕಿದೆ.

ಹೈ ಬಿಪಿ,ಹೈ ಶುಗರ್ ಸೇರಿದಂತೆ ಅನೇಕ ಅನಾರೋಗ್ಯದ ಕಾರಣ ಈ ಹಿಂದೆಯೇ ದೆಹಲಿಯ ಆರ್ ಎಲ್ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಡಿಕೆಶಿ, ಇದೇ ನೆಪವನ್ನು ನೀಡಿ ಜಾಮೀನು ಅರ್ಜಿ ಸಲ್ಲಿಸಿದ್ರು. ಕೋರ್ಟ್ ಈ ಅರ್ಜಿಯನ್ನು ಪರಿಗಣಿಸಿದ್ದು, ಸದ್ಯ ಷರತ್ತುಬದ್ಧ ಜಾಮೀನು ನೀಡಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ವಿಚಾರಣೆಗೆ ಕಸ್ಟಡಿಗೆ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಎಂಬುದನ್ನೂ ಸ್ಪಷ್ಟಪಡಿಸಿದೆ.

ಮುಂದಿನ ಪ್ರಕ್ರಿಯೆಗಳೇನು..?

ಈಗಾಗಲೇ ದಿನದ ಅರ್ಧ ಭಾಗ ಕಳೆದಿರುವುದರಿಂದ ಕೋರ್ಟ್ ಜಾಮೀನು ನೀಡಿದರೂ ಕೋರ್ಟ್ ಸಂಬಂಧಿತ ಪ್ರಕ್ರಿಯೆಗಳು ಮುಗಿಸುವ ವೇಳೆ ಕೋರ್ಟ್ ಸಮಯವೇ ಮುಗಿದಿರುತ್ತದೆ. ರೋಸ್ ಅವೆನ್ಯೂ ಕೋರ್ಟ್ ಮುಂದೆ ಇಬ್ಬರು ಶ್ಯೂರಿಟಿಗಳನ್ನು ಹಾಜರು ಪಡಿಸವುದರ ಜೊತೆಗೆ ಜಾಮೀನು ಅದೇಶ ಪ್ರತಿಯನ್ನು ಸಲ್ಲಿಸಬೇಕು. ಅಲ್ಲಿಂದ ತಿಹಾರ್ ಜೈಲಿಗೆ ಆ ಆದೇಶ ಪ್ರತಿಯನ್ನು ರವಾನಿಸಬೇಕು ಜಾಮೀನು ಮಂಜೂರು ಆದೇಶ ಪ್ರತಿಯನ್ನು ದೆಹಲಿ ಹೈಕೋಟ್ ನಿಂದ ಪಡೆಯಬೇಕು ಹೀಗೆ ಇನ್ನೂ ಅನೇಕ ಕೆಲಸಗಳು ಬಾಕಿ ಉಳಿದಿದ್ದು ಸಮಯದ ಅಭಾವವೂ ಇರುವುದರಿಂದ ನಾಳೆಯ ವೇಳೆಗೆ ಡಿಕೆಶಿ ಜೈಲಿನಿಂದ ಹೊರಬರುವ ಸಾಧ್ಯತೆಯೇ ಹೆಚ್ಚು ಎಂಬುದಾಗಿ ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.

Latest News

ರಾಜಕೀಯ

`ಬ್ಲ್ಯಾಕ್‌ ಮೇಲ್‌ ಕುಮಾರಸ್ವಾಮಿʼ ; ಕಣ್ಣೀರ ಕೋಡಿಯಿಂದ ಕುಟುಂಬಕ್ಕೆ ಲಾಭವೇ ಹೊರತು ಜನತೆಗೇನು ಲಾಭ? : ಅಶ್ವಥ್ ನಾರಾಯಣ್‌

ನೀವು ಈವರೆಗೆ ಹೇಳಿದ ಸುಳ್ಳುಗಳನ್ನು ಎಣಿಸಲು ಸಾಧ್ಯವೇ? ಎಂದು ಸಚಿವ(Minister) ಅಶ್ವಥ್‌ ನಾರಾಯಣ್(Ashwath Narayan) ಪ್ರಶ್ನಿಸಿದ್ದಾರೆ.

ದೇಶ-ವಿದೇಶ

ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದ ಭಾರತೀಯ ಸೇನೆ ; ದಾಳಿಯಲ್ಲಿ ಮೂವರು ಯೋಧರು ಹುತಾತ್ಮ!

ಸ್ವಾತಂತ್ರ್ಯ ದಿನಾಚರಣೆ(Independence Day) ಸಂದರ್ಭದಲ್ಲಿ ಉಗ್ರರು ದೇಶದ ವಿವಿಧ ಭಾಗಗಳಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ದೇಶ-ವಿದೇಶ

‘ಡಾನಿ’ ಬುಡಕಟ್ಟು ಜನಾಂಗದಲ್ಲಿ ಬೆರಳನ್ನು ಕತ್ತರಿಸುವುದೇ ಸಂಪ್ರದಾಯವಂತೆ!

ಇಂಡೋನೇಷ್ಯಾದ, ಪಪುವಾ ಗಿನಿಯಾ ದ್ವೀಪದಲ್ಲಿ ವಾಸಿಸುವ ಎಲ್ಲಾ ಡಾನಿ ಬುಡಕಟ್ಟಿನ ಮಹಿಳೆಯರನ್ನು ಕತ್ತರಿಸಿದ ಬೆರಳುಗಳಿಂದ ಬದುಕಲು ಒತ್ತಾಯಿಸಲಾಗುತ್ತದೆ.

ರಾಜಕೀಯ

`ನನ್ನಲ್ಲೂ ದಾಖಲೆಗಳಿವೆ ; `ಸರ್ಟಿಫಿಕೇಟ್ ಕೋರ್ಸ್ʼಗಿಂತ ಬೃಹತ್ ಚಾಪ್ಟರ್ 1, 2, 3 ಆಗುತ್ತವೆ, ಬಿಚ್ಚಲೇ? : ಹೆಚ್.ಡಿಕೆ

ಕಟ್ಟಡಗಳ ಹೆಸರಿನಲ್ಲಿ ಕಮೀಷನ್ ಕಾಂಚಾಣ, ಅಧಿಕಾರಿಗಳನ್ನು ಒಳಕ್ಕೆ ಹಾಕಿಕೊಂಡು ಡೀಲ್ ಮಾಡುವ ಅಶ್ವತ್ ನಾರಾಯಣ್, ಇದೇನಾ ನೀವು ನೀಡುತ್ತಿರುವ ಉನ್ನತ ಶಿಕ್ಷಣ?