ಬಾಲಿವುಡ್ ಖ್ಯಾತ ನಟ ಅಮಿತಾಬ್ ಬಚ್ಚನ್ ಅವರು ಕೊರೊನಾದಿಂದ ಗುಣಮುಖರಾಗಿ ಭಾನುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
77 ವರ್ಷ ವಯಸ್ಸಿನ ಅಮಿತಾಬ್ ಬಚ್ಚನ್ ಅವರಿಗೆ ಜುಲೈ 11ರಂದು ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಚಿಕಿತ್ಸೆಗೆ ಮುಂಬೈನ್ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ 23 ದಿನಗಳ ಕಾಲ ಚಿಕಿತ್ಸೆ ಪಡೆದು, ಭಾನುವಾರ ಅವರ ಕೋವಿಡ್ ಪರೀಕ್ಷೆ ವರದಿಯು ನೆಗೆಟಿವ್ ಬಂದಿರುವುದರಿಂದ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅಮಿತಾಬ್ ಬಚ್ಚನ್ ಪುತ್ರ ಅಭಿಷೇಕ್ ಬಚ್ಚನ್ ಕೂಡ ಕೊರೊನಾ ಸೋಂಕಿಗೆ ಒಳಗಾಗಿ ಅದೇ ಆಸ್ಪತ್ರೆಗೆ ಚಿಕಿತ್ಸೆ ದಾಖಲಾಗಿದ್ದಾರೆ. ʻನನ್ನ ತಂದೆ ಕೋವಿಡ್ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಅವರಿಗಾಗಿ ಪ್ರಾರ್ಥಿಸಿದ ಎಲ್ಲರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ. ನಮ್ಮ ತಂದೆ ಈಗ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆʼ ಎಂದು ಟ್ವೀಟ್ ಮಾಡಿದ್ದಾರೆ.