ಬೆಂಗಳೂರು:
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಸೋಂಕಿತರು, ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು, ಆಸ್ಪತ್ರೆ ಸಿಬ್ಬಂದಿ ಜತೆ ಸಮಾಲೋಚನೆ ನಡೆಸಿ ಅವರಲ್ಲಿ ಆತ್ಮಸ್ಥೆರ್ಯ ತುಂಬಿದರು.
ಕೋವಿಡ್ ಸೋಂಕಿತರನ್ನು ಸಮಾಜವು ವಿಚಿತ್ರ ಹಾಗೂ ನಿರ್ಲಕ್ಷ್ಯ ಭಾವದಿಂದ ನೋಡುತ್ತಿರುವ ಸಂದರ್ಭದಲ್ಲಿ ಶಿವಕುಮಾರ್ ಅವರು ಆಸ್ಪತ್ರೆಗೆ ನೀಡಿ, ಅವರಲ್ಲಿ ಧೈರ್ಯ ತುಂಬಿದ್ದು ಮಾದರಿ ನಡೆಯಾಗಿದೆ.
ಜತೆಗೆ ಮನೆ, ಕುಟುಂಬ ಪರಿವಾರದವರನ್ನು ಬಿಟ್ಟು, ತಮ್ಮ ಆರೋಗ್ಯ ಹಾಗೂ ಜೀವವನ್ನು ಪಣಕ್ಕಿಟ್ಟು ಸೇವಾ ಮನೋಭಾವದಿಂದ ಕೆಲಸ ಮಾಡುತ್ತಿರುವ ವೈದ್ಯರು, ಆಸ್ಪತ್ರೆ ಸಿಬ್ಬಂದಿಗಳ ಜತೆಗೂ ಮಾತನಾಡಿದ ಶಿವಕುಮಾರ್ ಅವರು, ಅವರ ಕಾರ್ಯವೈಖರಿ ಹಾಗೂ ಕಾರ್ಯಕ್ಷಮತೆಯನ್ನು ಪ್ರಶಂಸಿದರು. ಇದೇ ವೇಳೆ ಅವರ ಸಮಸ್ಯೆಗಳನ್ನು ಆಲಿಸಿ, ಅವರಲ್ಲಿ ಆತ್ಮವಿಶ್ವಾಸ ತುಂಬಿದ ಡಿ.ಕೆ.ಶಿವಕುಮಾರ್, ನೀವು ಉತ್ತಮವಾಗಿ ಕೆಲಸ ಮಾಡುತ್ತಿದ್ದೀರಿ. ಜನರ ಜೀವ ಉಳಿಸುತ್ತಿದ್ದೀರಿ. ನಿಮ್ಮ ಸೇವೆ ಅಮೂಲ್ಯವಾದದ್ದು. ನಿಮ್ಮ ಸೇವೆಗೆ ಬೆಲೆ ಕಟ್ಟಲು ಆಗದು ಎಂದು ಹೊಗಳಿದರು.
ಇದೇ ಸಂದರ್ಭದಲ್ಲಿ ಬೆಂಗಳೂರು ಮೆಡಿಕಲ್ ಕಾಲೇಜಿಗೂ ಭೇಟಿ ನೀಡಿದ್ದ ಶಿವಕುಮಾರ್ ಅವರು ಅಲ್ಲಿಂದಲೂ ಕೋವಿಡ್ ಚಿಕಿತ್ಸೆ ಕೇಂದ್ರಗಳಿಗೆ ವಿಡಿಯೋ ಕಾನ್ಫೆರೆನ್ಸ ಮೂಲಕ ಸಂಪರ್ಕ ಸಾಧಿಸಿ, ಕೊರೊನಾ ಸೋಂಕಿತರು, ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಜತೆ ಸಮಾಲೋಚನೆ ನಡೆಸಿದರು.
======================