• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೋಪದ ಹುಟ್ಟಿಗೆ ಈರುಳ್ಳಿಯೇ ಕಾರಣ; ನಾನಂತೂ ಈರುಳ್ಳಿ ತಿನ್ನಲ್ಲ ಸ್ವಾಮೀ..

Kiran K by Kiran K
in ದೇಶ-ವಿದೇಶ
ಕೋಪದ ಹುಟ್ಟಿಗೆ ಈರುಳ್ಳಿಯೇ ಕಾರಣ; ನಾನಂತೂ ಈರುಳ್ಳಿ ತಿನ್ನಲ್ಲ ಸ್ವಾಮೀ..
0
SHARES
6
VIEWS
Share on FacebookShare on Twitter

ದೆಹಲಿ, ಡಿ.05: ಈಗಂತೂ ಎಲ್ಲೆಂದರಲ್ಲಿ ಈರುಳ್ಳಿಯದೇ ಸುದ್ದಿ ಸಾಮಾಜಿಕ ಜಾಲತಾಣದಲ್ಲಂತೂ ಚಿನ್ನದಷ್ಟೇ ದುಬಾರಿ ಈರುಳ್ಳಿ ಎಂಬಂತೆ ಬಿಂಬಿಸಲಾಗಿದೆ.. ಈರುಳ್ಳಿಯ ಬೆಲೆ 100ರ ಗಡಿ ದಾಟಿದ್ದು ರಾಜ್ಯಸಭೆ, ಲೋಕಸಭೆಯಲ್ಲೂ ಈರುಳ್ಳಿ ಬೆಲೆ ಬಗ್ಗೆ ತೀವ್ರ ಚರ್ಚೆ ಆಗುತ್ತಿದೆ. ಈ ನಡುವೆ ಕೇಂದ್ರ ಸಚಿವರು ಈರುಳ್ಳಿ ಬಳಕೆಯ ಬಗ್ಗೆ  ಮಾತನಾಡಿರುವುದು ದೇಶಾದ್ಯಂತ ಸದ್ದು ಮಾಡುತ್ತಿದೆ.

ಹೌದು, ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಅತಿಯಾದ ಈರುಳ್ಳಿ ಸೇವನೆಯಿಂದ ಜನರಿಗೆ ಆದಷ್ಟು ಬೇಗನೇ ಕೋಪ ಬರುತ್ತದೆ. ನಾನಂತೂ ಹೆಚ್ಚಾಗಿ ಈರುಳ್ಳಿಯನ್ನು ಸೇವನೆ ಮಾಡುವುದಿಲ್ಲ. ನಮ್ಮ ಮನೆಯಲ್ಲಿ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಹೆಚ್ಚಾಗಿ ಬಳಕೆ ಮಾಡುವುದಿಲ್ಲ ಎಂದು ಸಚಿವರು ಹೇಳುತ್ತಿದ್ದಂತೆ ಇಡೀ ಕಲಾಪವೇ ನಗೆಗಡಲಿನಲ್ಲಿ ತೇಲಿತು.

ಕೇಂದ್ರದಿಂದ ಈರುಳ್ಳಿ ಬೆಲೆ ನಿಯಂತ್ರಣ ಲೋಕಸಭೆಯಲ್ಲಿ ಈರುಳ್ಳಿ ಬೆಲೆ ಏರಿಕೆ ಬಗ್ಗೆ ವಿರೋಧ ಪಕ್ಷಗಳು ಪ್ರಸ್ತಾಪಿಸಿದವು. ಈ ಬಗ್ಗೆ ಉತ್ತರ ನೀಡಿದ ಸಚಿವೆ, ಕೇಂದ್ರ ಸರ್ಕಾರ ಈಗಾಗಲೇ ಬೆಲೆ ಏರಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ತಗೆದುಕೊಂಡಿದೆ ಎಂದರು. ವಿದೇಶಗಳಿಗೆ ಈರುಳ್ಳಿ ರಫ್ತು ಮಾಡುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಕೇಂದ್ರ ಗ್ರಾಹಕ ಸಚಿವಾಲಯದಿಂದಲೇ ಈರುಳ್ಳಿ ಸಂಗ್ರಹಿಸಿಡಲು ಮಿತಿ ನಿಗದಿಗೊಳಿಸಲಾಗಿದೆ. ಸಗಟು ವ್ಯಾಪಾರಿಗಳಿಗೆ 25 ಟನ್ ಹಾಗೂ ಚಿಲ್ಲರೆ ವ್ಯಾಪಾರಿಗಳಿಗೆ 5 ಟನ್ ಗಳ ಮಿತಿ ನಿಗದಿಗೊಳಿಸಲಾಗಿದೆ. ಅಲ್ಲದೆ ದೇಶದಲ್ಲಿ ಈರುಳ್ಳಿ ಬೆಲೆ ಏರಿಕೆಗೆ ಮಧ್ಯವರ್ತಿಗಳ ಹಾವಳಿಯೇ ಮುಖ್ಯ ಕಾರಣ ಎಂದು ನಿರ್ಮಲಾ ಸೀತಾರಾಮನ್ ಆರೋಪಿಸಿದ್ದಾರೆ. ಆದ್ದರಿಂದ ರೈತರಿಗೆ ಮಾರುಕಟ್ಟೆಯ ನೇರ ಸಂಪರ್ಕ ವ್ಯವಸ್ಥೆ ಜಾರಿಗೊಳಿಸಿದರೆ, ಇದಕ್ಕೆಲ್ಲ ಕಡಿವಾಣ ಹಾಕಲು ಕೊಂಚ ಮಟ್ಟಿಗೆ ಸಹಾಯವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

Related News

ತಾಳ್ಮೆ ಪರೀಕ್ಷಿಸಬೇಡಿ, ಇಲ್ಲವಾದರೆ ಪರಿಣಾಮ ಭೀಕರವಾಗಿರಲಿದೆ : ಇರಾನ್‌ಗೆ ಟ್ರಂಪ್ ವಾರ್ನಿಂಗ್
ದೇಶ-ವಿದೇಶ

ತಾಳ್ಮೆ ಪರೀಕ್ಷಿಸಬೇಡಿ, ಇಲ್ಲವಾದರೆ ಪರಿಣಾಮ ಭೀಕರವಾಗಿರಲಿದೆ : ಇರಾನ್‌ಗೆ ಟ್ರಂಪ್ ವಾರ್ನಿಂಗ್

May 8, 2026
ಅಮೆರಿಕಾ-ಇರಾನ್ ಸಂಘರ್ಷ : ಇರಾನ್ ತೈಲದ ಹಡಗಿನ ಮೇಲೆ ಅಮೆರಿಕ ದಾಳಿ, ಜಾಗತಿಕ ಆತಂಕ ಹೆಚ್ಚಳ
ದೇಶ-ವಿದೇಶ

ಅಮೆರಿಕಾ-ಇರಾನ್ ಸಂಘರ್ಷ : ಇರಾನ್ ತೈಲದ ಹಡಗಿನ ಮೇಲೆ ಅಮೆರಿಕ ದಾಳಿ, ಜಾಗತಿಕ ಆತಂಕ ಹೆಚ್ಚಳ

May 7, 2026
ʻಆಪರೇಷನ್‌ ಸಿಂಧೂರʼಕ್ಕೆ ಒಂದು ವರ್ಷ: India Forgives Nothing ಎಂದು ಸಂದೇಶ ರವಾನಿಸಿದ ಭಾರತೀಯ ಸೇನೆ 
ದೇಶ-ವಿದೇಶ

ʻಆಪರೇಷನ್‌ ಸಿಂಧೂರʼಕ್ಕೆ ಒಂದು ವರ್ಷ: India Forgives Nothing ಎಂದು ಸಂದೇಶ ರವಾನಿಸಿದ ಭಾರತೀಯ ಸೇನೆ 

May 7, 2026
ತಮಿಳುನಾಡಿನಲ್ಲಿ ವಿಜಯ್ ಅಬ್ಬರ: ಕಾಂಗ್ರೆಸ್ ಬೆಂಬಲದೊಂದಿಗೆ TVK ಸರ್ಕಾರಕ್ಕೆ ಗ್ರೀನ್ ಸಿಗ್ನಲ್..!
ದೇಶ-ವಿದೇಶ

ತಮಿಳುನಾಡಿನಲ್ಲಿ ವಿಜಯ್ ಅಬ್ಬರ: ಕಾಂಗ್ರೆಸ್ ಬೆಂಬಲದೊಂದಿಗೆ TVK ಸರ್ಕಾರಕ್ಕೆ ಗ್ರೀನ್ ಸಿಗ್ನಲ್..!

May 6, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.