ರಾಜ್ಯದಲ್ಲಿ ಕೊರೊನಾ ಸೋಂಕಿನ ಅಬ್ಬರ ಮುಂದುವರಿದಿದ್ದು,
ಇಂದು (ಬುಧವಾರ) 5,503 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಮಹಾಮಾರಿ ಕೊರೊನಾ ಸೋಂಕಿಗೆ 92 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇದುವರೆಗೆ ಒಟ್ಟು ಸೋಂಕಿತರ ಸಂಖ್ಯೆ 1,12,504ಕ್ಕೆ ಏರಿಕೆಯಾಗಿದೆ. ಇಂದು 2,397 ಹಾಗೂ ಒಟ್ಟು 42,901 ಮಂದಿ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 67,448 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಚೇತರಿಕೆ ಪ್ರಮಾಣ ಶೇ. 38.13 ಹಾಗೂ ಮರಣ ಪ್ರಮಾಣ ಶೇ. 1.91 ರಷ್ಟಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 50 ಸಾವಿರದ ಗಡಿದಾಟಿದ್ದು, ಬುಧವಾರವೂ ಸಹ 2270 ಹೊಸ ಪ್ರಕರಣಗಳು ಪತ್ತೆಯಾಗಿದೆ. ಅಲ್ಲದೇ ಮಹಾಮಾರಿ ಕೊರೊನಾ 30 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಈವರೆಗೂ ಒಟ್ಟು 51,091 ಮಂದಿ ಸೋಂಕಿತರು ಪತ್ತೆಯಾಗಿದ್ದು, ಇವರಲ್ಲಿ ಇಂದು ಬಿಡುಗಡೆಯಾದ 1118 ಮಂದಿ ಸೇರಿದಂತೆ ಈವರೆಗೂ 13,879 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ಬೆಂಗಳೂರಿನಲ್ಲಿ 36,224 ಸಕ್ರಿಯ ಪ್ರಕರಣಗಳಿದ್ದು, ಈವರೆಗೂ ಒಟ್ಟು 987 ಜನರು ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ.