ಕೋವಿಡ್-19 ಪರೀಕ್ಷೆ ಮಾಡಿಸಲು ಕಡ್ಡಾಯವಾಗಿ ಆಧಾರ್, ಐಡಿ ಕಾರ್ಡ್ ತೋರಿಸಬೇಕಿದೆ ಎಂದು ವೈದ್ಯಕೀಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದ್ದು, ಹೆಚ್ಚು ಕೋವಿಡ್ ಟೆಸ್ಟ್ ಮಾಡಿದರಷ್ಟೇ ಕೊರೊನಾ ನಿಯಂತ್ರಣ ಸುಲಭವಾಗುತ್ತದೆ. ರಾಜ್ಯದಲ್ಲಿ ಪ್ರತಿದಿನ 30-40 ಸಾವಿರ ಟೆಸ್ಟ್ ಮಾಡಲಾಗುತ್ತಿದೆ. ಆದರೆ ಕೆಲವರು ತಪ್ಪು ವಿಳಾಸ, ತಪ್ಪು ಮೊಬೈಲ್ ನಂಬರ್ ಕೊಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಡ್ಡಾಯವಾಗಿ ಆಧಾರ್, ಐಡಿ ಕಾರ್ಡ್ ತೋರಿಸಿ OTP ಬಂದ ಮೇಲೆ ಟೆಸ್ಟ್ ಮಾಡಲು ಸೂಚನೆ ನೀಡಿದ್ದೇನೆ ಎಂದು ಸಚಿವ ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.

ದೇಶ-ವಿದೇಶ
ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ
ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.