download app

FOLLOW US ON >

Tuesday, January 25, 2022
English English Kannada Kannada

ಕ್ರೀಡಾ ಸಚಿವರಿಗೂ ಕೊರೊನಾ

ಈ ಬಗ್ಗೆ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ  ಸ್ಪಷ್ಟಪಡಿಸಿರುವ ಅವರು, ನಾನು ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಚಿವರು ಮನವಿ ಮಾಡಿದ್ದಾರೆ. ಕೊರೋನಾ ಹೆಚ್ಚಾದ ಹಿನ್ನೆಲೆ ಹಲವಾರು ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಿದ್ದೆ ಕೆಲವು ದಿನದ ನಂತರ ಜ್ವರ ಬಾಧಿಸಿತ್ತು
Narayana gowda

ಬೆಂಗಳೂರು, ಜ 13 : ಕ್ರೀಡಾ ಇಲಾಖೆ ಹಾಗೂ ರೇಷ್ಮೆ ಮತ್ತು ಯುವ ಸಬಲೀಕರಣ ಸಚಿವರಾದ ಡಾ. ನಾರಯಣಗೌಡ ಅವರಿಗೂ ಕೂಡ ಕೊರೊನಾ ಪಾಸಿಟಿವ್‌ ಬಂದಿದ್ದು ಸದ್ಯ ಆಸ್ಪತ್ರೆ ಸೇರಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ  ಸ್ಪಷ್ಟಪಡಿಸಿರುವ ಅವರು, ನಾನು ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಚಿವರು ಮನವಿ ಮಾಡಿದ್ದಾರೆ. ಕೊರೋನಾ ಹೆಚ್ಚಾದ ಹಿನ್ನೆಲೆ ಹಲವಾರು ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಿದ್ದೆ ಕೆಲವು ದಿನದ ನಂತರ ಜ್ವರ ಬಾಧಿಸಿತ್ತು. ಕೋವಿಡ್ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಎಂದು ಬಂದಿದೆ. ಈ ಹಿನ್ನೆಲೆ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. .ನನಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಅಸ್ಪತ್ರೆಗೆ ದಾಖಲಾಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಮುಂಜಾಗ್ರತೆ ವಹಿಸಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಈ ಮೂಲಕ ಮನವಿ ಮಾಡುತ್ತಿದ್ದೇನೆ.

ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಮಾಧುಸ್ವಾಮಿ ಹಾಗೂ ಆರ್. ಅಶೋಕ್‌ಗೆ ಕೊರೊನಾ ಸೋಂಕು ದೃಢವಾಗಿತ್ತು.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp

Submit Your Article