ಬೆಂಗಳೂರು.ಸೆ.09: ವೈದ್ಯಕೀಯ ಕ್ಷೇತ್ರವನ್ನು ಹಿಡಿತದಲ್ಲಿಡುವ ಉದ್ದೇಶದಿಂದ ಮೊದಲ ಹಂತವಾಗಿ ಖಾಸಗಿ ಕ್ಲಿನಿಕ್ ನಡೆಸುವಂತಹ ಸರ್ಕಾರಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು ನಾನು ಬಡವರ ಪರ ಇರೋನು. ಬಡವರಿಗೆ ಸಮಸ್ಯೆ ಮಾಡುವ ಸರ್ಕಾರಿ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇನೆ. ಡಿಸ್ ಮಿಸ್ ಮಾಡುವ ಕ್ರಮ ತೆಗೆದುಕೊಳಳಲಾಗುವುದು ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ.
ಸರ್ಕಾರಿ ವೈದ್ಯರ ಖಾಸಗಿ ಕ್ಲಿನಿಕ್ ನಿಂದ ಬಡ ಜನರಿಗೆ ಸಮಸ್ಯೆಯಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಬಡ ರೋಗಿಗಳ ಸಮಸ್ಯೆಗಳನ್ನು ಆಲಿಸಲು, ಸಿಬ್ಬಂದಿ ಕೊರತೆ, ಆಸ್ಪತ್ರೆಯಲ್ಲಿನ ಸ್ಥಿತಿಗತಿಗಳನ್ನ ನೋಡುವ ಸಲುವಾಗಿ ಆಸ್ಪತ್ರೆಯಲ್ಲಿ ವಾಸ್ತವ್ಯ ಹೂಡುವುದಾಗಿ ಆರೋಗ್ಯ ಸಚಿವರಾದ ಶ್ರೀರಾಮುಲು ತಿಳಿಸಿದ್ದಾರೆ.