ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಡಾ.ಎಸ್.ಬಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡಿದ್ದು, ಶೀಘ್ರವೇ ಆಸ್ಪತ್ರೆಯಿಂದ ಬಿಡುಗಡೆ ಹೊಂದುವ ನಿರೀಕ್ಷೆ ಇದೆ.
ಗಾಯಕ ಎಸ್ಪಿಬಿ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಪುತ್ರ ಎಸ್.ಪಿ.ಚರಣ್, ಅಪ್ಪನ ಆರೋಗ್ಯ ಸ್ಥಿರವಾಗಿದ್ದು, ದಿನೇ ದಿನ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಇಕೆಎಂಒ ಉಪಕರಣ, ವೆಂಟಿಲೇಟರ್, ಫಿಸಿಯೋಥೆರೆಪಿ ಚಿಕಿತ್ಸೆ ಮುಂದುವರಿದಿದೆ.
ದ್ರವ ರೂಪದ ಆಹಾರ ಸೇವಿಸುತ್ತಿದ್ದಾರೆ. ಶೀಘ್ರವೇ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳುವುದನ್ನೇ ಎದುರು ನೋಡುತ್ತಿದ್ದೇನೆ ಎಂದು ತಮ್ಮ ಟ್ವಿಟರ್ ಹಾಗೂ ಇನ್ಸ್ಟಾಗ್ರಾಂ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.