Visit Channel

ಗ್ಯಾಸ್ ಸಿಲಿಂಡರ್ ಸಿಡಿದು ಬೆಂಕಿಗಾಹುತಿಯಾದ ಮನೆ..

ಗ್ಯಾಸ್ ಸಿಲಿಂಡರ್ ಸಿಡಿದು ಸಂಪೂರ್ಣ ಮನೆ ಸುಟ್ಟುಕರಕಲಾದ ಘಟನೆ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿ ನಡೆದಿದೆ. ಕೃಷ್ಣ ಎಂಬವರ ಮನೆಯಲ್ಲಿ ಗ್ಯಾಸ್ ಸ್ಫೋಟಗೊಂಡಿದ್ದು; ಮನೆಯಲ್ಲಿ ಯಾರೂ ಇಲ್ಲದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ.ಸೋಮವಾರ ಸಂಜೆ ಈ ಘಟನೆ ನಡೆದಿದ್ದು ಸ್ಫೋಟದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದೆ.

ಇನ್ನು ಮನೆಯಲ್ಲಿ ಕೃಷ್ಣ ಎಂಬವರ ಪತ್ನಿ ಮತ್ತು ಮಗಳು ಮಾತ್ರ ವಾಸವಿದ್ದರು . ಆದ್ರೆ ಘಟನೆಯ ಸಮಯದಲ್ಲಿ ಅವರಿಬ್ಬರು ಸುಳ್ಯಕ್ಕೆ ಹೋಗಿದ್ದು ಪ್ರಾಣಹಾನಿಯಿಂದ ಪಾರಾಗಿದ್ದಾರೆ.ಮನೆ ಸಂಪೂರ್ಣ ನಾಶವಾಗಿದ್ದು ಮನೆಯ ಎದುರಲ್ಲಿದ್ದ ತೆಂಗಿನಮರದ ತುದಿಯವರೆಗೆ ಬೆಂಕಿಯ ಕೆನ್ನಾಲಿಗೆ ಹತ್ತಿ ತೆಂಗಿನ ಮರಕ್ಕೂ ಬೆಂಕಿ ಹತ್ತಿಕೊಂಡಿದೆ. ಇನ್ನು ಸ್ಥಳಕ್ಕೆ ಸುಳ್ಯ ಅಗ್ನಿಶಾಮಕ ದಳದ ಪ್ರಭಾರ ಠಾಣಾಧಿಕಾರಿ ವಿಶ್ವನಾಥ ಪೂಜಾರಿ ಹಾಗೂ ತಂಡ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.