Visit Channel

ಚೀನಾದಲ್ಲಿ ಸ್ವೈನ್ ಫ್ಲೂ ಜಿ4 ಎಂಬ ವೈರಸ್ ಪತ್ತೆ

0_Piglets-on-a-farm-near-Manciano-Tuscany

ಇನ್ನು ಕರೋನಾ ವೈರಸ್ ಸೋಂಕಿನ ಆರ್ಭಟವೇ ನಿಂತಿಲ್ಲ,ಆಗಲೇ ಚೀನಾದಲ್ಲಿ ಮತ್ತೊಂದು ಸಾಂಕ್ರಾಮಿಕ ವೈರಸ್ ಒಂದು ಪತ್ತೆಯಾಗಿದೆ. ಚೀನಾದಲ್ಲಿರುವ ಹಂದಿಗಳಲ್ಲಿ ಈ ವೈರಸ್ ಕಾಣಿಸಿಕೊಂಡಿದ್ದು, ಚೀನಾದ ಸಂಶೋಧಕರು ಈ ವೈರಸ್ ಸಾಂಕ್ರಾಮಿಕವಾಗಿ ಹರಡಬಲ್ಲ ವೈರಸ್ ಇದಾಗಿದೆ ಎಂದು ತಿಳಿಸಿದ್ದಾರೆ.
213 ರಾಷ್ಟ್ರಗಳು ಸದ್ಯ ಈಗ ಬಂದಿರುವ ಮಹಾಮಾರಿ ಕೋವಿಡ್-19 ವೈರಸ್ ಸೋಂಕಿನಿಂದ ಉಂಟಾಗಿರುವ ಆರೋಗ್ಯ ಸಮಸ್ಯೆಯನ್ನೇ ಸರಿಪಡಿಸಿಕೊಳ್ಳಲು ಒದ್ದಾಡುತ್ತಿವೆ. ಕರೋನಾ ಸೋಂಕಿಗೆ ಇನ್ನು ಲಸಿಕೆ ಕಂಡುಹಿಡಿದಿಲ್ಲ. ಈಗ ಇನ್ನೊಂದು ಹೊಸ ಸೋಂಕು ಪತ್ತೆಯಾಗಿರುವುದು ಆತಂಕಕಾರಿ ವಿಷಯವಾಗಿದೆ. ಸ್ಪೈನ್ ಫ್ಲೊ ವೈರಸ್ ಹಂದಿ ಜ್ವರವಾಗಿದ್ದು, ಸದ್ಯ ಚೀನಾದ ಹಂದಿಗಳಲ್ಲಿ ಈ ವೈರಸ್ ಕಾಣಿಸಿಕೊಂಡಿದೆ. ಈ ವೈರಸ್ ಮನುಷ್ಯರಿಗೆ ಸುಲಭವಾಗಿ ಅಂಟಿಕೊಳ್ಳುವ ಸಾಮಥ್ರ್ಯವನ್ನು ಸುಲಭವಾಗಿ ಸಾಂಕ್ರಾಮಿಕ ಹರಡುವ ರೋಗವಾಗಿದೆ ಎಂದು ಚೀನಾ ವಿಜ್ಞಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಚೀನಾ ಅಗ್ರಿಕಲ್ಚರಲ್ ಯೂನಿವರ್ಸಿಟಿಯ ಲಿಯು ಜಿನ್ಹುವಾ ನೇತೃತ್ವದ ತಂಡ ಚೀನಾದ 10 ಕಸಾಯಿಕಾನೆಗಳ 30 ಸಾವಿರಕ್ಕೂ ಹೆಚ್ಚು ಹಂದಿಗಳ ಸ್ವ್ಯಾಬ್‍ಗಳ ಪರೀಕ್ಷೆ ಮಾಡಿದ್ದು, ಹಂದಿಗಳು ಉಸಿರಾಟದ ತೊಂದರೆಯಿಂದ ಬಳಲುತ್ತಿರುವುದಾಗಿ ತಿಳಿಸಿದೆ. ಈ ವೈರಸ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅಗತ್ಯ ಎಂದು ತಿಳಿಸಿದೆ. ಈ ವೈರಸ್ ಕುರಿತು ನ್ಯಾಷನಲ್ ಅಕಾಡೆಮಿ ಆಫ್ ಸೈನ್ಸಸ್‍ನ ಪ್ರೊಸೀಡಿಂಗ್ಸ್‍ನಲ್ಲಿ ಪ್ರಕಟವಾಗಿರುವ ಅಧ್ಯಯನವೂ ಜಿ4 ಹೆಸರಿನ ವೈರಸ್ ಬಗ್ಗೆ ಮಾಹಿತಿ ನೀಡಿದೆ. 2009ರಲ್ಲಿ ಕೂಡ ಹಂದಿಜ್ವರ(ಎಚ್1ಎನ್1)ದ ಇನ್ನೊಂದು ರೂಪಾಂತರ ಎಂದು ಹೇಳಲಾಗುತ್ತಿದೆ. ಈ ವೈರಸ್‍ನಲ್ಲಿ ಸುಲಭವಾಗಿ ಮನುಷ್ಯನಿಗೆ ಅಂಟಿಕೊಳ್ಳುವ ಎಲ್ಲಾ ಲಕ್ಷಣಗಳನ್ನು ಹೊಂದಿದೆ ಎಂದು ಚೀನಿ ವಿಶ್ವವಿದ್ಯಾನಿಲಯಗಳು ಮತ್ತು ಚೀನಾದ ರೋಗ ನಿಯಂತ್ರಣ ಹಾಗೂ ತಡೆಗಟ್ಟುವಿಕೆ ಕೇಂದ್ರದ ವಿಜ್ಞಾನಿಗಳು ಖಚಿತ ಮಾಹಿತಿ ನೀಡಿದ್ದಾರೆ.

Latest News

Lal singh chadda
ಮನರಂಜನೆ

“ಲಾಲ್ ಸಿಂಗ್ ಚಡ್ಡಾ” ಚಿತ್ರ ಭಾರತೀಯ ಸೇನೆ ಮತ್ತು ಸಿಖ್ಖರನ್ನು ಅವಮಾನಿಸಿದೆ! : ಕ್ರಿಕೆಟಿಗ ಮಾಂಟಿ ಪನೇಸರ್

ಲಾಲ್ ಸಿಂಗ್ ಚಡ್ಡಾ  ಚಿತ್ರ ನಿಷೇಧಕ್ಕೆ ಮಾಂಟಿ ಪನೇಸರ್ ಕರೆ.  ಕ್ರಿಕೆಟಿಗ ಮಾಂಟಿ ಪನೇಸರ್ ಅವರು ಟ್ವಿಟರ್ನಲ್ಲಿ “ಲಾಲ್ ಸಿಂಗ್ ಚಡ್ಡಾ ಚಿತ್ರ ನಾಚಿಕೆಗೇಡಿನದು.

Medical Test
ಮಾಹಿತಿ

ಮದುವೆಗೂ ಮುನ್ನ ಈ ವೈದ್ಯಕೀಯ ಪರೀಕ್ಷೆಗಳನ್ನು ತಪ್ಪದೇ ಮಾಡಿಸಿಕೊಳ್ಳಿ ; ಅನುವಂಶಿಕ ಕಾಯಿಲೆಗಳನ್ನು ಪತ್ತೆ ಮಾಡಿ

ಕೆಲ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವುದರಿಂದ ಆನುವಂಶಿಕ ಕಾಯಿಲೆಗಳು ಪತ್ತೆ ಮಾಡಿ, ಅವುಗಳಿಗೆ ಚಿಕಿತ್ಸೆಯನ್ನು ಕೂಡ ಪಡೆದುಕೊಳ್ಳಬಹುದು.

Siddaramaiah
ರಾಜಕೀಯ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ ಜೈಲೂಟ ತಿನ್ನುತ್ತಿದ್ದರು : ಬಿಜೆಪಿ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ(Siddaramaiah) ಜೈಲೂಟ ತಿನ್ನುತ್ತಿದ್ದರು ಎಂದು ರಾಜ್ಯ ಬಿಜೆಪಿ(State BJP) ವ್ಯಂಗ್ಯವಾಡಿದೆ.

Gaalipata 2
ಮನರಂಜನೆ

ತೆರೆಯ ಮೇಲೆ ಹಾರಿದ ‘ಗಾಳಿಪಟ-2’; ಗಣಿ-ಭಟ್ರು ಕಾಂಬಿನೇಷನ್‍ಗೆ ಶಿಳ್ಳೆ-ಚಪ್ಪಾಳೆ

ಯೋಗರಾಜ್ ಭಟ್ ಮತ್ತು ‘ಗೋಲ್ಡನ್ ಸ್ಟಾರ್’ ಗಣೇಶ್ ಅವರ ಕಾಂಬಿನೇಷನ್ ಹೇಗೆ ಮೂಡಿಬಂದಿದೆ ಎಂಬುದನ್ನು ತಿಳಿಯಲು ಅಭಿಮಾನಿಗಳು ಕುತೂಹಲದಿಂದ ಚಿತ್ರಮಂದಿರದತ್ತ ಹೆಜ್ಜೆ ಹಾಕಿದ್ದಾರೆ.