ವಿದ್ಯಾರ್ಥಿಗಳ ಈವರೆಗಿನ ತರಗತಿಗಳಲ್ಲಿನ ಸಾಧನೆಯ ಆಧಾರದ ಮೇಲೆ 10 ಮತ್ತು 12ನೇ ತರಗತಿಗಳ ಮೌಲ್ಯಮಾಪನ ಅಳೆಯುವ ಪ್ರಕ್ರಿಯೆ ಆರಂಭವಾಗಿದೆ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‍ಇ) ತಿಳಿಸಿದೆ.
ಈ ಮೊದಲು ವಿದ್ಯಾರ್ಥಿಗಳ ತರಗತಿಗಳಲ್ಲಿನ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡಲಾಗುತ್ತಿದ್ದು. ಜುಲೈ.15 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಸಿಬಿಎಸ್‍ಇ ಪರೀಕ್ಷಾ ನಿಯಂತ್ರಕ ಡಾ.ಸನ್ಯಾಂ ಭಾರಧ್ವಾಜ್ ತಿಳಿಸಿದ್ದಾರೆ. 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಿರುವ ಪರೀಕ್ಷೆಗಳಲ್ಲಿ ಪಡೆದಿರುವ ಅಂಕಗಳು ಹಾಗೂ ಅಂತರಿಕ ಮೌಲ್ಯಮಾಪನ ಆಧಾರದ ಮೇಲೆ ಮೌಲ್ಯಮಾಪನ ಮಾಡಿ ಫಲಿತಾಂಶ ನೀಡಲಿದೆ ಎಂದು ವಕೀಲರು ಸುಪ್ರೀಂ ಕೋರ್ಟ್‍ಗೆ ಮಾಹಿತಿ ನೀಡಿದ್ದರು.