ಬೆಂಗಳೂರು, ನ. 23: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಯುವರತ್ನ’ ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು, ಕನ್ನಡದ ಜೊತೆಗೆ ತೆಲುಗಿನಲ್ಲೂ ತಯಾರಾಗಿದೆ. ಇದರೊಂದಿಗೆ ಪುನೀತ್ ರಾಜ್‍ಕುಮಾರ್ ಅವರ ಚಿತ್ರವೊಂದು ಮೊದಲ ಬಾರಿಗೆ ತೆಲುಗಿನಲ್ಲೂ ಬಿಡುಗಡೆಯಾಗುತ್ತಿದೆ.
ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿಯಲ್ಲಿ ತಯಾರಾಗಿರುವ ಯುವರತ್ನ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿತ್ರದ ಮೊದಲ ಹಾಡು ರಿಲೀಸ್ ಮಾಡಲು ಚಿತ್ರತಂಡ ತಯಾರಿ ಮಾಡಿಕೊಂಡಿದೆ.
ಕೆಜಿಎಫ್ ಚಿತ್ರ ನಿರ್ಮಿಸಿದ್ದ ವಿಜಯ್ ಕಿರಗಂದೂರು ಯುವರತ್ನ ಸಿನಿಮಾಗೆ ಬಂಡವಾಳ ಹಾಕಿದ್ದು, ಸಂತೋಷ್ ಆನಂದರಾಮ್ ಯುವರತ್ನನಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಆರಂಭದಿಂದಲೂ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಯುವರತ್ನ ಚಿತ್ರ ತೆಲುಗಿನಲ್ಲೂ ಬಿಡುಗಡೆಯಾಗಲಿದೆ. ಚಿತ್ರದ ನಿರ್ದೇಶಕ ಸಂತೋಷ್ ಆನಂದರಾಮ್, ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.