download app

FOLLOW US ON >

Monday, August 8, 2022
Breaking News
ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!ಸಿಎಂಗೆ ಕೋವಿಡ್ ಪಾಸಿಟಿವ್ ದೃಢ ; ದೆಹಲಿ ಪ್ರವಾಸ ರದ್ದು!ಜಮೀರ್‌ ಅಹಮದ್‌ ಮುಸ್ಲಿಂ ಮಹಿಳೆಯರು ಚುನಾವಣೆಗೆ ಸ್ಪರ್ಧಿಸುವುದನ್ನು ಬಯಸುವುದಿಲ್ಲ : ಬಿಜೆಪಿಜಮ್ಮು- ಕಾಶ್ಮೀರದಲ್ಲಿ ಪತ್ತೆಯಾಗಿದೆ 1,200 ವರ್ಷಗಳ ಹಿಂದಿನ ಮೂರು ತಲೆಯ ವಿಷ್ಣುವಿನ ಪುರಾತನ ವಿಗ್ರಹ!
English English Kannada Kannada

ಡಾ. ಸಿ.ಎನ್. ಮಂಜುನಾಥ್ ಅವರಿಂದ ದಸರಾ ಉದ್ಘಾಟನೆ; ಸಚಿವ ಎಸ್.ಟಿ.ಎಸ್.

ಮೈಸೂರು: ಪ್ರಸಕ್ತ ಸಾಲಿನ ಮೈಸೂರು ದಸರಾ ಉದ್ಘಾಟನೆಗೆ ಜಯದೇವ ಆಸ್ಪತ್ರೆ ಮುಖ್ಯಸ್ಥರಾದ ಡಾ. ಸಿ.ಎನ್.ಮಂಜುನಾಥ್ ಅವರನ್ನು ಆಯ್ಕೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಮಾಡಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.

ಮೈಸೂರಿನ ಪೌರ ಕಾರ್ಮಿಕರಾದ ಮರಗಮ್ಮ, ವೈದ್ಯಕೀಯ ಅಧಿಕಾರಿ ಡಾ. ನವೀನ್ ಕುಮಾರ್, ಸ್ಟಾಫ್ ನರ್ಸ್ ರುಕ್ಮಿಣಿ, ಆಶಾ ಕಾರ್ಯಕರ್ತೆಯಾದ ನೂರ್ ಜಾನ್, ಪೊಲೀಸ್ ಕಾನ್ಸ್ ಟೇಬಲ್ ಶ್ರೀ ಕುಮಾರ್ ಪಿ., ಸಾಮಾಜಿಕ ಕಾರ್ಯಕರ್ತರಾದ ಆಯೂಬ್ ಅಹಮದ್ ಅವರನ್ನು ದಸರಾ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನಿಸಲಾಗುವುದು ಎಂದು ಸುದ್ದಿಗಾರರಿಗೆ ಸಚಿವರು ತಿಳಿಸಿದರು.

ತಜ್ಞರ ತಂಡ ನೀಡಿದ ವರದಿ ಪ್ರಕಾರವಾಗಿಯೇ ದಸರಾ ಆಚರಣೆಯನ್ನು ಮಾಡಲಾಗುವುದು. ಇದರಲ್ಲಿ ಯಾವುದೇ ವ್ಯತ್ಯಾಸ ಇರದು. ತಂಡದ ಶಿಫಾರಸಿನನ್ವಯ ಎಲ್ಲ ಕಾರ್ಯಕ್ರಮಗಳನ್ನು ನಿಗದಿಪಡಿಸುತ್ತೇವೆ.

ಈ ಬಗ್ಗೆ ಮುಖ್ಯಮಂತ್ರಿಗಳಿಗೂ ಮಾಹಿತಿ ನೀಡಿದ್ದೇನೆ. ದಸರಾ ಉದ್ಘಾಟನೆಗೆ ಚಾಮುಂಡಿ ಬೆಟ್ಟದಲ್ಲಿ 300 ಜನ ಸೇರಿದಂತೆ ಯಾವೆಲ್ಲ ನಿಯಮಗಳನ್ನು ವಿಧಿಸಲಾಗಿದೆಯೋ ಅದರಂತೆಯೇ ಕಾರ್ಯಕ್ರಮವನ್ನು ರೂಪಿಸುತ್ತೇವೆ. ಈ ನಿಟ್ಟಿನಲ್ಲಿ ಪೊಲೀಸ್ ಆಯುಕ್ತರು ಹಾಗೂ ಜನಪ್ರತಿನಿಧಿಗಳ ಸಭೆ ಕರೆದು ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

ದೀಪಾಲಂಕಾರದ ಬಗ್ಗೆ ಯಾವುದೇ ಗೊಂದಲ ಇಲ್ಲ. ಇದು ಹೈಪವರ್ ಕಮಿಟಿಯಲ್ಲಿ ತೀರ್ಮಾನವಾಗಿದೆ. ಕಳೆದ ಬಾರಿ ಯಾವ ರೀತಿ ಇತ್ತೋ ಅದೇ ರೀತಿ ವ್ಯವಸ್ಥೆ ಮಾಡಲು ತೀರ್ಮಾನಿಸಲಾಗಿತ್ತು. ಹೀಗಾಗಿ ನೂರಾರು ಕಿ.ಮೀ. ದೂರ ಇರುವ ವ್ಯಾಪ್ತಿಯನ್ನು ಕಡಿತಗೊಳಿಸಿ 50 ಕಿಲೋ ಮೀಟರ್ ಗೆ ಸೀಮಿತಗೊಳಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಕೊರೋನಾ ಹಿನ್ನೆಲೆ ಪಾರ್ಕಿಂಗ್ ಗೆ ಎಲ್ಲ ಕಡೆ ಅನುಮತಿ ಕೊಡುವುದಿಲ್ಲ. ಸುರಕ್ಷತೆ ದೃಷ್ಟಿಯಿಂದ ಏನೆಲ್ಲ ಕಾರ್ಯಗಳನ್ನು ಕೈಗೊಳ್ಳಬೇಕೋ ಅದನ್ನು ಪಡೆಯುತ್ತೇನೆ ಎಂದು ಸಚಿವರು ಹೇಳಿದರು.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article