ನವದೆಹಲಿ: ಡಿಕೆ ಶಿವಕುಮಾರ್ ಅವರನ್ನು ರಾಜಕೀಯ ಷಡ್ಯಂತ್ರದಲ್ಲಿ ಸಿಲುಕಿಸಲಾಗಿದೆ. ಈ ಸಂದರ್ಭದಲ್ಲಿ ಅವರ ಜೊತೆ ನಾವು ಹಾಗೂ ಇಡೀ ಪಕ್ಷ ನಿಲ್ಲಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಧೈರ್ಯ ತುಂಬಿದ್ದಾರೆ.
ಗುರುವಾರ ಸಂಸದ ಡಿಕೆ ಸುರೇಶ್ ಅವರಿಗೆ ಕರೆ ಮಾಡಿ ಡಿಕೆ ಶಿವಕುಮಾರ್ ಅವರ ಬಗ್ಗೆ ಸೋನಿಯಾ ಗಾಂಧಿ ವಿಚಾರಿಸಿದರು. ಡಿಕೆ ಶಿವಕುಮಾರ್ ಅವರ ಆರೋಗ್ಯ ಹೇಗಿದೆ. ಅವರ ಮಾನಸಿಕ ಸ್ಥಿತಿ ಹೇಗಿದೆ ಎಂದು ವಿಚಾರಿಸಿದರು.
ಸುಮಾರು ಮೂರು ನಿಮಿಷಗಳ ಕಾಲ ಮಾತನಾಡಿದ ಸೋನಿಯಾ ಗಾಂಧಿ ಅವರು ‘ಬಿಜೆಪಿ ವಿರೋಧ ಪಕ್ಷಗಳ ನಾಯಕರನ್ನು ಮಟ್ಟಹಾಕಲು ದ್ವೇಷದ ರಾಜಕಾರಣ ಮಾಡುತ್ತಿದೆ. ಹೀಗಾಗಿ ಡಿಕೆ ಶಿವಕುಮಾರ್ ಅವರು ಧೈರ್ಯ ಕಳೆದುಕೊಳ್ಳುವುದು ಬೇಡ. ಈ ಸಮಯದಲಿ ನಾವೆಲ್ಲರು ಅವರ ಜತೆ ಇದ್ದೇವೆ’ ಎಂದು ಸುರೇಶ್ ಅವರಿಗೆ ಹೇಳಿದ್ದಾರೆ.