ಬೆಂಗಳೂರು: ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವಥನಾರಾಯಣ ಅವರು ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನಲೆಯಲ್ಲಿ ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದು; ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲದೆ ನಾನು ಆರೋಗ್ಯವಾಗಿದ್ದೇನೆ ಮನೆಯಲ್ಲೇ ಪ್ರತ್ಯೇಕವಾಗಿರುತ್ತೇನೆ ಎಂದು ಹೇಳಿದ್ದಾರೆ.
ಕಳೆದ ದಿನಗಳಲ್ಲಿ ನನ್ನ ಜೊತೆ ನೇರ ಸಂಪರ್ಕದಲ್ಲಿದ್ದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು ಹಾಗೂ ಕೊರೋನಾ ಪರೀಕ್ಷೆಗೆ ಒಳಪಡಬೇಕಾಗಿ ಅಶ್ವಥನಾರಾಯಣ ಟ್ವೀಟ್ ಮಾಡಿದ್ದಾರೆ.