ಬೆಂಗಳೂರು, ನ. 17: ಮರಾಠಾ ಪ್ರಾಧಿಕಾರ ರಚನೆಯ ವಿರುದ್ದ ಕನ್ನಡ ಸಂಘಟನೆಗಳು ತೀರ್ವವಾಗಿ ವಿರೋಧಿಸಿದವು.ಪಟಾಕಿ ಸಿಡಿಸಿ ವಾಟಾಳ್ ನಾಗರಾಜ್ ಅವರು ವಿರೋಧ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಮಸ್ಕಿ ಹಾಗೂ ಬಸವಕಲ್ಯಾಣ ಉಪ ಚುನಾವಣೆಯನ್ನು ದೃಷ್ಠಿಯಲ್ಲಿ ಇಟ್ಟುಕೊಂಡು ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿತ್ತು. ಇಂತಹ ಸರ್ಕಾರದ ನಡೆಗೆ ಕನ್ನಡ ಪರ ಸಂಘಟನೆಗಳ ಮುಖಂಡರು ವಿರೋಧ ವ್ಯಕ್ತ ಪಡಿಸಿದ್ದರು. ಇದರ ಬೆನ್ನಲ್ಲಿಯೇ ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ ಡಿಸೆಂಬರ್ 5ಕ್ಕೆ, ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.
ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಮರಾಠ ಪ್ರಾಧಿಕಾರ ರಚನೆ ಮಾಡಿದ್ದನ್ನು ವಿರೋಧಿಸಿ, ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ ಕ್ರಮವನ್ನು ವಿರೋಧಿಸಲಾಯಿತು.
ಇದೇ ವೇಳೆ ಮಾತನಾಡಿ ಪ್ರಾಧಿಕಾರ ವಾಪಾಸ್ ಪಡೆದುಕೊಳ್ಳಬೇಕು. ಇಲ್ಲವಾದಲ್ಲಿ ಡಿಸೆಂಬರ್ 5ರಂದು ಕರ್ನಾಟಕ ಬಂದ್ ನಡೆಸಲಾಗುತ್ತದೆ ಎಂದ ಅವರು, ಎಲ್ಲಾ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಅವರು ಕರೆ ನೀಡಿದರು.