ಕೇರಳ, ಅ 29: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಲಿವುಡ್‌ನಲ್ಲಿ ಈಗಾಗಲೇ ಡ್ರಗ್ಸ್ ನಶೆ ಏರಿದ ಕೂಡಲೇ ಸ್ಯಾಂಡಲ್‌ವುಡ್‌ನಲ್ಲಿಯೂ ಈ ಪ್ರಕರಣಕ್ಕೆ ಸಂಬಂದಿಸಿದಂತೆ ಭಾರಿ ಸದ್ದು ಮಾಡಿತ್ತು. ಇದೀಗ ಇದೇ ಪ್ರಕರಣ ನೆರೆಯ ಕೇರಳ ರಾಜ್ಯಕ್ಕೂ ಕಾಲಿಟ್ಟಿರುವುದಾಗಿ ತಿಳಿದು ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮ್ಯಾಕ್ಸಿಸ್)ದ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣ ಅವರ ಪುತ್ರ ಬಿನೇಶ್ ಕೊಡಿಯೇರಿ ಅವರನ್ನು ಇಡಿ 7 ದಿನಗಳ ಕಾಲ ಬಂಧಿಸಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಡ್ರಗ್ಸ್ ಪೆಡ್ಲರ್ ಅನೂಪ್‌ಗೆ ಹಣಕಾಸಿನ ನೆರವು ನೀಡಿ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ, ಇದೀಗ ಇಡಿ ಕೇರಳದ ಮಾಜಿ ಗೃಹ ಸಚಿವ ಹಾಗೂ ಸಿಪಿಎಂ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣ ಅವರ ಪುತ್ರ ಬಿನೇಶ್ ಕೊಡಿಯೇರಿ ಅವರನ್ನು ಇಡಿ ವಿಚಾರಣೆ ವೇಳೆ ಬಂಧಿಸಿದೆ.