ಬೆಂಗಳೂರು, ಅ.15: ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪರಪ್ಪನ ಅಗ್ರಹಾರ ಜೈಲು ಸೇರಿದ್ದಂತಹ ರಾಗಿಣಿ ಜಾಮೀನಿಗಾಗಿ ಎನ್ ಡಿ ಪಿ ಎಸ್ ಕೋರ್ಟ್ ಮೊರೆ ಹೋಗಿದ್ದಾರೆ. ಆದರೆ ನಟಿ ರಾಗಿಣಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಜೈಲುಪಾಲಾಗಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಇದೀಗ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಈ ಮೂಲಕ ಡ್ರಗ್ಸ್ ಪ್ರಕರಣದಲ್ಲಿ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟಿ ರಾಗಿಣಿ ಪರ ವಕೀಲರು ಸಲ್ಲಿಸಿರುವಂತಹ ಜಾಮೀನು ಅರ್ಜಿ, ಹೈಕೋರ್ಟ್ ನಲ್ಲಿ ಸೋಮವಾರ ವಿಚಾರಣೆಗೆ ಬರಲಿದೆ ಎಂದು ಮಾಹಿತಿ ಮೂಲಗಳು ತಿಳಿಸಿವೆ. ಹೈಕೋರ್ಟ್‌ನಲ್ಲಾದರೂ ನಟಿ ರಾಗಿಣಿಗೆ ಜಾಮೀನು ಲಭಿಸುತ್ತದೆಯೇ? ಎಂಬುದನ್ನು ಕಾದು ನೋಡಬೇಕಿದೆ.