ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ನಟಿ ಐಂದ್ರಿತಾ ರೇ ಹಾಗೂ ನಟ ದಿಗಂತ್ ದಂಪತಿಯನ್ನು ವಿಚಾರಣೆ ನಡೆಸಿರುವ ಸಿಸಿಬಿ ಈಗ ದಿಗಂತ್ಗೆ 2ನೇ ಬಾರಿ ನೋಟಿಸ್ ಜಾರಿ ಮಾಡಿದೆ.
ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ನಟಿ ರಾಗಿಣಿ ದ್ವಿವೇದಿ, ಸಂಜನಾ ವಿಚಾರಣೆ ನಡೆದಿದ್ದು ಇಬ್ಬರು ಜೈಲಿನಲ್ಲಿದ್ದಾರೆ. ಹಾಗೆಯೇ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 24 ಕ್ಕೆ ಕೋರ್ಟ್ ಮುಂದೂಡಿದೆ.
ಈ ನಡುವೆ ಐಂದ್ರಿತಾ ರೇ, ದಿಗಂತ್ ದಂಪತಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಿದ್ದ ಸಿಸಿಬಿ ಇದೀಗ ಈ ಹೇಳಿಕೆಗಳ ಆಧಾರದಲ್ಲೇ ಮತ್ತೆ ದಿಗಂತ್ಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ವರದಿ ತಿಳಿಸಿದೆ.