ಡ್ರಗ್ ಪ್ರಕರಣ; ಮಾಜಿ ಸಚಿವರ ಪುತ್ರ ಅರೆಸ್ಟ್‌

ಬೆಂಗಳೂರು, ನ. 09: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರುದ್ರಪ್ಪ ಲಮಾಣಿ ಅವರ ಪುತ್ರ ಸೇರಿದಂತೆ ಮೂವರನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ಡ್ರಗ್ ಪೆಡ್ಲರ್ ಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿ ಯನ್ನು ಬಂಧಿಸಲಾಗಿದೆ.

ಡಾರ್ಕ್ ವೆಬ್ ಸೈಟ್​ನಲ್ಲಿ ಡ್ರಗ್ಸ್ ತರಿಸಿಕೊಳ್ಳುತ್ತಿದ್ದವರ ಮಾಹಿತಿಯನ್ನು ಬೆನ್ನಟ್ಟಿದ ಸಿಸಿಬಿ ಅಧಿಕಾರಿಗಳು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನ. 4ರಂದು ದಾಳಿ ನಡೆಸಿದ್ದರು. ಫಾರಿನ್ ಪೋಸ್ಟ್ ಆಫೀಸ್‌ಗೆ ವಿದೇಶದಿಂದ ಡ್ರಗ್ಸ್​ ಪಾರ್ಸೆಲ್ ಬರುತಿತ್ತು. ಈ ಬಗ್ಗೆ ಮಾಹಿತಿ ಪಡೆದಿದ್ದ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಆರೋಪಿ ಸುಜಯ್ ಎಂಬಾತ ಗಾಂಜಾ ಸಮೇತ ಸಿಸಿಬಿ ಕೈಗೆ ಸಿಕ್ಕಿಬಿದ್ದಿದ್ದ.

ಆರೋಪಿ ಸುಜಯ್ ವಿಚಾರಣೆಯ ವೇಳೆಗೆ ಮತ್ತಿಬ್ಬರು ಆರೋಪಿಗಳಾದ ಹೇಮಂತ್ ಮತ್ತು ಸುನೀಶ್ ಬಗ್ಗೆ ಮಾಹಿತಿ ಹೊರಬಿದ್ದಿತ್ತು. ಇವರಿಬ್ಬರು ಗೋವಾದಲ್ಲಿರುವ ಮಾಹಿತಿ ಪಡೆದು ಅಲ್ಲಿಗೆ ಪೊಲೀಸರು ತೆರಳಿದಾಗ ದರ್ಶನ್ ಕೂಡಾ ಸಿಕ್ಕಿಬಿದ್ದಾನೆ. ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

Latest News

ಮಾಹಿತಿ

ITR ಸಲ್ಲಿಕೆ ಗಡುವು ಜುಲೈ 31 ಅಂತ್ಯ ; ದಂಡ ಶುಲ್ಕವಿಲ್ಲದೆ ಯಾರೆಲ್ಲಾ ITR ಸಲ್ಲಿಸಬಹುದು ಗೊತ್ತಾ?

ಗಡುವು ಮುಗಿದರೂ ಯಾರೆಲ್ಲ ದಂಡ ಶುಲ್ಕವಿಲ್ಲದೆ ಐಟಿಆರ್‌ ಸಲ್ಲಿಸಬಹುದು, ಇದಕ್ಕೆ ಸಂಬಂಧಿಸಿದಂತೆ ನಿಯಮ ಏನು ಹೇಳುತ್ತದೆ ಎನ್ನುವ ವಿವರ ಇಲ್ಲಿದೆ. ಮುಂದೆ ಓದಿ,

ದೇಶ-ವಿದೇಶ

“ನನ್ನ ಮಕ್ಕಳಿಗೆ ಆಹಾರ ನೀಡಬೇಕೇ? ಅಥವಾ ಅವರನ್ನು ಕೊಲ್ಲಬೇಕೇ?”: ಬೆಲೆ ಏರಿಕೆ ಬಗ್ಗೆ ಪಾಕ್ ಮಹಿಳೆ ಆಕ್ರೋಶ!

ನನ್ನ ಮಕ್ಕಳಿಗೆ ಹಾಲು ಮತ್ತು ಔಷಧಿಗಳನ್ನು ಖರೀದಿಸುವುದು, ನನ್ನ ಮಕ್ಕಳಿಗೆ ಆಹಾರ ನೀಡುವುದು ಯಾವುದು ನನ್ನಿಂದ ಸಾಧ್ಯವಾಗುತ್ತಿಲ್ಲ.

ಮಾಹಿತಿ

ಬುದ್ದಿವಂತರು ಜಗಳವನ್ನು ಹೇಗೆ ತಪ್ಪಿಸುತ್ತಾರೆ ಗೊತ್ತೇ? ; ಈ ಅಚ್ಚರಿ ಮಾಹಿತಿ ಓದಿ

ಕೆಟ್ಟ ವಾಗ್ವಾದವನ್ನು ತಡೆಯುವುದು ಹೇಗೆ ಮತ್ತು ಅದನ್ನು ಸರಿಯಾಗಿ ರೀತಿಯಲ್ಲಿ ಹೇಗೆ ನಿಭಾಯಿಸಬಹುದು ಎನ್ನುವುದಕ್ಕಾಗಿ ಕೆಲವು ಉಪಾಯಗಳು ಇಲ್ಲಿವೆ ನೋಡಿ.