ತಂದೆ, ತಾಯಿ ಹೇಳಿದ ಬುದ್ಧಿವಾದಕ್ಕೆ ನೊಂದು ಪ್ರೇಮಿಗಳ ಆತ್ಮಹತ್ಯೆ

ಪ್ರೇಮದಲ್ಲಿದ್ದ ಯುವಜೋಡಿಗಳು ತಮ್ಮ ಪೋಷಕರು ನೀಡಿದ ಸಲಹೆಗೆ ಕೋಪಗೊಂಡು ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಟಿ ನರಸಿಪುರ ತಾಲ್ಲೂಕಿನ ಹೆಮ್ಮಿಗೆ ಸೇತುವೆ ಬಳಿ ಈ ಘಟನೆ ನಡೆದಿದ್ದು, ತಂದೆ ತಾಯಿ ಹೇಳಿದ ಬುದ್ಧಿವಾದಕ್ಕೆ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮನು (21) ಮತ್ತು ದೀಪಶ್ರೀ (16) ಎಂಬ ಯುವಜೋಡಿಗಳೇ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು ಎಂದು ತಿಳಿದು ಬಂದಿದೆ. ಮನು ನಂಜನಗೂಡಿನ ಕಾಮಹಳ್ಳಿ ಗ್ರಾಮದವರಾಗಿದ್ದರೆ, ದೀಪಶ್ರೀ ಟಿ ನರಸೀಪುರ ತಾಲ್ಲೂಕಿನ ಶ್ರೀರಂಪುರ ಗ್ರಾಮದವರು. ದೀಪಶ್ರೀ ಟಿ ನರಸಿಪುರದ ವಿದ್ಯೋದಯ ಕಾಲೇಜಿನಲ್ಲಿ ಎರಡನೇ ಪಿಯು ಓದುತ್ತಿದ್ದರು.

ಮನು ಮತ್ತು ದೀಪಶ್ರೀ ಇಬ್ಬರೂ ಕೆಲವು ತಿಂಗಳುಗಳಿಂದ ಪ್ರೀತಿಸುತ್ತಿದ್ದರು. ಈ ವಿಚಾರ ತಿಳಿದು ಪೋಷಕರು ಬೈದು ಬುದ್ದಿ ಹೇಳಿದ್ದಾರೆ, ಮೊದಲು ಓದಿನ ಕಡೆ ಗಮನಕೊಡಿ, ಇದೆಲ್ಲಾ ಆಮೇಲೆ ಎಂದು, ಅವರ ಮನಸ್ಸನ್ನು ಬದಲಿಸಲು ಪ್ರಯತ್ನಿಸಿದ್ದಾರೆ, ಇಷ್ಟಕ್ಕೆ ಇದನ್ನು ನಿಲ್ಲಿಸುವಂತೆ ಸಲಹೆ ನೀಡಿದ್ದಾರೆ. ಹೆತ್ತವರ ಸಲಹೆಯಿಂದ ನಿರಾಶೆಗೊಂಡ ಯುವ ಪ್ರೇಮಿಗಳು ಮೈಸೂರು ತಲಕಾಡು ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.