Visit Channel

ದರ್ಶನ್, ಯಶ್ ವಿರುದ್ಧ ವ್ಯಂಗ್ಯವಾಡಿದ ಮಾಜಿ ಸಂಸದ ಶಿವರಾಮೇಗೌಡ

dc-Cover-ja59u4v22gpunmlhegjeulghj6-20190417024204.Medi_

ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ಗೆಲುವಿಗೆ ಕಾರಣರಾದವರು ಸ್ಯಾಂಡಲ್ ವುಡ್ ನ ಬಲುಬೇಡಿಕೆಯ ನಟರಾದ ಡಿ ಬಾಸ್ ಹಾಗೂ ರಾಕಿಗ್ ಸ್ಟಾರ್ ಯಶ್..ಸುಮಲತಾ ಪರ ಪ್ರಚಾರ ಮಾಡಿದ್ದ ಆ ದಿನಗಳಲ್ಲಿ ಸ್ಪರ್ಧಿಗಳಿಗಿಂತಲೂ ಹೆಚ್ಚಾಗಿ ಅಬ್ಬರಿಸಿ ಬೊಬ್ಬಿರಿದ ಈ ನಟರು ಜೋಡೆತ್ತುಗಳೆಂದೇ ಹೆಸರು ಪಡೆದುಕೊಂಡಿದ್ದರು.

ಸದ್ಯ ಮಂಡ್ಯ ಮಾಜಿ ಸಂಸದ ಶಿವರಾಮೇ ಗೌಡ ಜೋಡೆತ್ತುಗಳ ವಿರುದ್ಧ ಗುಡುಗಿದ್ದಾರೆ..ಕಬ್ಬು ಕಟಾವಾಗದೆ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದು, ಜೋಡೆತ್ತುಗಳು ಈಗ ರೈತರ ನೆರವಿಗೆ ಬರಲಿ ಎಂದು ವ್ಯಂಗ್ಯವಾಡಿದ್ದಾರೆ.

ನಾಗಮಂಗಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಂದು ಕುಮಾರಸ್ವಾಮಿಗೆ ಮತ ಹಾಕಿ ಎಂದು ಮತದಾರರಲ್ಲಿ ಕೇಳಿಕೊಂಡರೂ ಜೋಡೆತ್ತುಗಳ ಪ್ರಚಾರದಿಂದಾಗಿ ಸುಮಲತಾರವರ  ಕೈ ಮೇಲಾಯ್ತು..ಅಂದು ಹಾಗೆ ಮಂಡ್ಯದುದ್ದಗಲಕ್ಕೂ ಪ್ರಚಾರ ಮಾಡಿದ್ದ ಜೋಡೆತ್ತುಗಳು ಈಗ ಬಂದು ರೈತರು ಬೆಳೆದ ಕಬ್ಬಿಗೆ ಸರಿಯಾದ ಬೆಲೆ ಕೊಡಿಸಲಿ ಎಂದು, ಸುಮಲತಾ ಪರ ಪ್ರಚಾರ ಮಾಡಿದ್ದ ನಟರಾದ ಯಶ್ ಹಾಗೂ  ದರ್ಶನ್ ವಿರುದ್ಧ ಕಿಡಿ ಕಾರಿದ್ದಾರೆ.

Latest News

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.

JK
ದೇಶ-ವಿದೇಶ

ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರನ್ನು ಹತ್ಯೆಗೈದ ಭಯೋತ್ಪಾದಕರು!

ಕಾಶ್ಮೀರಿ ಪಂಡಿತರೊಬ್ಬರನ್ನು(Kashmiri Pandits) ಗುಂಡಿಕ್ಕಿ ಕೊಂದು ಆತನ ಸಹೋದರನನ್ನು ಗಾಯಗೊಳಿಸಿದ್ದಾರೆ. ಸಂತ್ರಸ್ತ ಸಹೋದರನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.