Visit Channel

ದಸರಾ ವೇಳೆ ಪ್ರವಾಸಿ ತಾಣಗಳಿಗಿಲ್ಲ ಪ್ರವೇಶ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಪ್ರಮುಖ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವ ರೋಹಿಣಿ ಸಿಂಧೂರಿ

ಮೈಸೂರು, ಅ.15: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಈ ಬಾರಿಯ ನಾಡಹಬ್ಬ ದಸರ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಮೈಸೂರು ಹಾಗೂ ಸುತ್ತಮುತ್ತಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಆಗಮಿಸದಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಪ್ರಮುಖ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮೈಸೂರಿನಲ್ಲಿ ಈಗಾಗಲೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸುಮಾರು 900 ಮಂದಿ ಮೃತಪಟ್ಟಿದ್ದಾರೆ. 6800ಕ್ಕೂ ಹೆಚ್ಚು ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಈ ಪರಿಸ್ಥಿತಿಯಲ್ಲಿ ಪ್ರವಾಸಿಗರು ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದು ಸೂಕ್ತವಲ್ಲ ಎಂದು ಅವರು ತಿಳಿಸಿದ್ದಾರೆ.

ಕಳೆದ ವರ್ಷ ದಸರಾ ವೇಳೆ ಲಕ್ಷಾಂತರ ಮಂದಿ ಮೈಸೂರಿಗೆ ಭೇಟಿ ನೀಡಿದ್ದಾರೆ. ಈ ವರ್ಷ ಸೋಂಕು ಹಡುತ್ತಿರುವುದರಿಂದ ಈ ಸಂಖ್ಯೆಯ ಜನರು ಮೈಸೂರಿಗೆ ಆಗಮಿಸಿದರೆ ಹೆಚ್ಚಿನ ಜನರಿಗೆ ಸೋಂಕು ಹರಡಬಹುದು ಎಂಬ ಉದ್ದೇಶದಿಂದ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಚಾಮುಂಡಿಬೆಟ್ಟ ಪ್ರವೇಶವನ್ನು ಅಕ್ಟೋಬರ್ 14 ರಿಂದ ಹಾಗೂ ಮೈಸೂರು ಅರಮನೆ, ಮೃಗಾಲಯ, ನಂಜನಗೂಡು ನಂಜುಂಡೇಶ್ವರ ದೇವಾಲಯದ ಪ್ರವೇಶವನ್ನು ಅಕ್ಟೋಬರ್ 17 ರಿಂದ ನವೆಂಬರ್ 1 ರವರೆಗೆ ನಿರ್ಬಂಧಿಸಿಲಾಗಿದೆ. ಮೈಸೂರಿಗೆ ಸಮೀಪದ ಪ್ರವಾಸಿ ತಾಣವಾದ ಕೃಷ್ಣರಾಜ ಸಾಗರ, ರಂಗನತಿಟ್ಟು ಪಕ್ಷಿಧಾಮ, ಶ್ರೀರಂಗಪಟ್ಟಣ, ನಿಮಿಷಾಂಭಕ್ಕೂ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲು ಅಲ್ಲಿನ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.