ದೇಶದಲ್ಲಿ ನಿಲ್ಲದ ಕೊರೊನಾ ಅಬ್ಬರ: 70 ಲಕ್ಷದತ್ತ ಸಮೀಪಿಸಿದ ಸೋಂಕಿತರ ಸಂಖ್ಯೆ

ಹೊಸದಿಲ್ಲಿ: ದೇಶದಲ್ಲಿ ದಿನೇ ದಿನೆ ಕೋವಿಡ್‌ ವೈರಸ್‌ ಸೋಂಕು ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಇದುವರೆಗೆ ಒಟ್ಟು ಸೋಂಕಿತರ ಸಂಖ್ಯೆ 70 ಲಕ್ಷದತ್ತ ಸಮೀಪಿಸಿದೆ. ಕಳೆದ 24 ಗಂಟೆಗಳಲ್ಲಿ 73,272 ಮಂದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 926 ಮಂದಿ ಮೃತಪಟ್ಟಿದ್ದಾರೆ.

ದೇಶದಲ್ಲಿ 69,79,424 ಸೋಂಕು ಪ್ರಕರಣಗಳ ಪೈಕಿ, 8,83,185 ಪ್ರಕರಣಗಳು ಸಕ್ರಿಯವಾಗಿ ಇವೆ. ಅಲ್ಲದೇ, 59,88,823 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸೋಂಕಿನಿಂದಾಗಿ ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 1,07,416ಕ್ಕೆ ತಲುಪಿದೆ.

Exit mobile version