ಬೆಂಗಳೂರು, ಅ.20: ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಮುನಿರತ್ನ ಅವರು ತಮ್ಮ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ.
ರಾಜರಾಜೇಶ್ವರಿ ನಗರ ಉಪಚುನಾವಣೆಗೆ ನಾಮಪತ್ರ ವಾಪಸ್ ಪಡೆಯಲು ಅಕ್ಟೋಬರ್ 19 ಕೊನೆ ದಿನವಾಗಿತ್ತು. ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಮುನಿರತ್ನ ಸೇರಿದಂತೆ ನಾಲ್ವರು ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದು, 16 ಅಭ್ಯರ್ಥಿಗಳು ಸದ್ಯ ಕಣದಲ್ಲಿ ಉಳಿದುಕೊಂಡಿದ್ದಾರೆ.
ಇನ್ನು ಕಣದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕಾಂಗ್ರೆಸ್ ನಿಂದ ಹೆಚ್. ಕುಸುಮಾ ಹಾಗೂ ಜೆಡಿಎಸ್ ನಿಂದ ವಿ.ಕೃಷ್ಣಮೂರ್ತಿ ಸೇರಿದಂತೆ ಒಟ್ಟು 16 ಅಭ್ಯರ್ಥಿಗಳು ಕಣದಲ್ಲಿದ್ದಾರೆ.