ಮಂಗಳೂರು, ನ. 3: ಮಂಗಳೂರಿನಲ್ಲಿ ನ 5ಕ್ಕೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಈ ಸಭೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನಾಳೆ ರಾತ್ರಿ ಮಂಗಳೂರಿಗೆ ಪ್ರಯಾಣಿಸಲಿದ್ದಾರೆ.
ನ. 4 ರಂದು ರಾತ್ರಿ ಯಡಿಯೂರಪ್ಪ ಅವರು ಮಂಗಳೂರಿಗೆ ಆಗಮಿಸಿ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನವೆಂಬರ್ 5ರಂದು ಕೊಡಿಯಾಲ್‌ಬೈಲ್‌ನಲ್ಲಿ ಇರುವ ಟಿವಿ ರಮಣ ಪೈ ಸಭಾಂಗಣದಲ್ಲಿ ರಾಜ್ಯ ಬಿಜೆಪಿಯ ವಿಶೇಷ ಸಭೆಯನ್ನು ಉದ್ಘಾಟನೆ ಮಾಡಲಿದ್ದಾರೆ. 5ರಂದು ಬೆಳಿಗ್ಗೆ 11.30ಕ್ಕೆ ಓಷನ್ ಪರ್ಲ್ ಹೋಟೆಲಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಬೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 2.30ಕ್ಕೆ ಟಿ ವಿ ರಮಣ ಪೈ ಸಭಾಂಗಣದಲ್ಲಿ ನಡೆಯುವ ವಿಶೇಷ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಅವರು ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.